ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ: ಸಿಎಂ ಸಿದ್ದರಾಮಯ್ಯ

ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ದಾಳಿ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. 
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ  ದಾಳಿ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. 

ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಬೇಕಿರುವುದು ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದಾರೆ. 

ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಟೀಕಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com