ಬೆಂಗಳೂರು: ಬಿಎಂಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ 21 ವರ್ಷದ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ 21 ವರ್ಷದ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕುಸುಮಿತಾ ಕಾಲೇಜಿಗೆ ತೆರಳುತ್ತಿದ್ದಾಗ ರಾಜಾಜಿನಗರದಲ್ಲಿ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಅಪಘಾತವಾದ ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ತಿಳಿಸಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಬಿಎಂಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಸ್ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕಾರಣ ತಿಳಿದುಕೊಳ್ಳಲು ಸುತ್ತಮುತ್ತಲಿನ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದಾರೆ.

ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಸಾರ್ವಜನಿಕ ದಾರಿಯಲ್ಲಿ ಅತಿವೇಗದ ಚಾಲನೆ ಅಥವಾ ಸವಾರಿ) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಸ್ ಚಾಲಕನನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com