ಬೆಂಗಳೂರು: ಮತ್ತೆರಡು ಕಡೆ ಟೆಲಿ ಐಸಿಯು ಕ್ಲಸ್ಟರ್'ಗೆ ಡಿ.ಕೆ.ಶಿವಕುಮಾರ್ ಚಾಲನೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬೆಂಗಳೂರಪ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಟೆಲಿ ಐಸಿಯು ಕ್ಲಸ್ಟರ್ ಅನ್ನು ಶುಕ್ರವಾರ ಉದ್ಘಾಟಿಸಿದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟೆಲಿ ಐಸಿಯು ಕ್ಲಸ್ಟರ್ ಅನ್ನು ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟೆಲಿ ಐಸಿಯು ಕ್ಲಸ್ಟರ್ ಅನ್ನು ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬೆಂಗಳೂರಪ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಟೆಲಿ ಐಸಿಯು ಕ್ಲಸ್ಟರ್ ಅನ್ನು ಶುಕ್ರವಾರ ಉದ್ಘಾಟಿಸಿದರು.

ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆ ಹಾಗೂ ಬಳ್ಳಾರಿ ವೈದ್ಯಕೀಯ ಕಾಲೇಜಿನಲ್ಲಿ ನೂತನ ಟೆಲಿ ಐಸಿಯು ಕ್ಲಸ್ಟರ್ ಮಾಡಲಾಗಿದ್ದು, ಅಲ್ಲಿಂದಲೇ ತಾಲೂಕು ಆಸ್ಪತ್ರೆಗಳ ಐಸಿಯು ಕೇಂದ್ರಗಳನ್ನು ಪರಿಶೀಲಿಸಿ ನಿಗಾವಹಿಸಬಹುದಾಗಿದೆ. ಆರೋಗ್ಯ ರಕ್ಷಣೆಯಲ್ಲಿ  ಟೆಲಿ-ಇಂಟೆನ್ಸಿವ್ ಕೇರ್ ಘಟಕಗಳು ಕ್ರಾಂತಿಕಾರಿ ಹೆಜ್ಜೆಯಾಗಿದ್ದು, ಇದು ಗ್ರಾಮೀಣ ಪ್ರದೇಶಗಳಿಗೆ ವರದಾನವಾಗಿದೆ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದರು. ಅಲ್ಲದೆ, ಪ್ರತಿಯೊಬ್ಬರೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಪಡೆಯಲು ಈ ಕೇಂದ್ರಗಳನ್ನು ರಾಜ್ಯದಾದ್ಯಂತ ವಿಸ್ತರಿಸಬೇಕೆಂದು ತಿಳಿಸಿದರು.

ಇದು ಆರೋಗ್ಯ ಕ್ಷೇತ್ರದ ಯೋಜನೆ ಮಾತ್ರವಲ್ಲ. ಶಿಕ್ಷಣ ಕ್ಷೇತ್ರದ ಕ್ರಾಂತಿಯೂ ಆಗಿದೆ. ನಮ್ಮ ಬದುಕಿನಲ್ಲಿ ಪ್ರತಿನಿತ್ಯ ತಾಂತ್ರಿಕತೆ ವಿಚಾರವಾಗಿ ಅನೇಕ ಸಂಶೋಧನೆ ನಡೆಯುತ್ತಿವೆ. ನಮ್ಮ ರಾಜ್ಯ ದೇಶದ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಆರೋಗ್ಯ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದೆ. ಹೆಲ್ತ್ ಟೂರಿಸಂ ನಲ್ಲೂ ನಮ್ಮ ರಾಜ್ಯ ಹೆಸರು ಮಾಡಿದೆ. ಖಾಸಗಿ ಆರೋಗ್ಯ ಸೇವಾದಾರರು ಕೂಡ ಈ ವಿಚಾರವಾಗಿ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದರು.

ದಿನೇಶ್ ಗೂಂಡುರಾವ್ ಅವರ ಆರೋಗ್ಯ ಇಲಾಖೆಯಲ್ಲಿರುವ ಅಧಿಕಾರಿಗಳು ಬಹಳ ಬದ್ಧತೆ ಹೊಂದಿದ್ದಾರೆ. ಇಂತಹ ತಂಡದಿಂದ ಮಾತ್ರ ಈ ರೀತಿಯ ಕಾರ್ಯಕ್ರಮ ನೀಡಲು ಸಾಧ್ಯ. ಗ್ರಾಮೀಣ ಪ್ರದೇಶದ ಜನರನ್ನು ಬೆಂಗಳೂರಿಗೆ ತರುವಷ್ಟರಲ್ಲಿ ಅನಾಹುತ ಸಂಭವಿಸುತ್ತವೆ. ಹೀಗಾಗಿ ತಾಲೂಕು ಮಟ್ಟದಲ್ಲಿ ಐಸಿಯು ಬೆಡ್ ಗಳ ಕೇಂದ್ರಗಳನ್ನು ಸ್ಥಾಪಿಸಬೇಕು.

ಜನರ ಆರೋಗ್ಯ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಮ್ಮ ಆರೋಗ್ಯವೇ ನಮ್ಮ ನಿಜವಾದ ಆಸ್ತಿ. ಹೀಗಾಗಿ ನಾಡಿನ ಜನರ ಆರೋಗ್ಯ ಕಾಪಾಡಬೇಕು. ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದಿದ್ದಾರೆ. ಈ ಕ್ಷೇತ್ರದಲ್ಲಿ 24 ತಾಸು ಕೂಡ ಕೆಲಸ ಮಾಡಬೇಕಾಗುತ್ತದೆ. ಅಂತಹ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಮಾನವನ ಸೇವೆಗೆ ಮುಂದಾಗಿರುವುದಕ್ಕೆ ಅಭಿನಂದನೆಗಳು. ನಿಮ್ಮ ಜತೆ ಸರ್ಕಾರ ಸದಾ ನಿಲ್ಲಲಿದೆ. ಇಂತಹ ನೂರಾರು ಕ್ಯಾಂಪಸ್ ನಿರ್ಮಾಣ ಮಾಡಬೇಕು.

ದೇಶದಲ್ಲಿ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ರಾಜ್ಯ ಎಂದರೆ ಅದು ಕರ್ನಾಟಕ. ನಮ್ಮ ರಾಜ್ಯದಲ್ಲೇ ಅತಿ ಹೆಚ್ಚು ವೈದ್ಯರನ್ನು ತಯಾರು ಮಾಡಲಾಗುತ್ತಿದೆ. ಇಲ್ಲಿ ತಯಾರಾಗುವ ವೈದ್ಯರನ್ನು ಹೊರ ರಾಜ್ಯಗಳು ಹಾಗೂ ದೇಶಗಳಿಗೆ ರವಾನೆ ಮಾಡುತ್ತಿದ್ದೇವೆ. ನಮ್ಮ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ಆರ್ಥಿಕ ಸ್ವಾವಲಂಬನೆ ಕಂಡುಕೊಳ್ಳುವಂತೆ ಮಾಡಿಕೊಳ್ಳುವಂತೆ ವ್ಯವಸ್ಥೆ ರೂಪಿಸುವಂತೆ ಸಲಹೆ ನೀಡುತ್ತೇನೆ ಎಂದು ಹೇಳಿದರು.

ಖಾಸಗಿ ಮಾಫಿಯಾದಿಂದ ಆ್ಯಂಬುಲೆನ್ಸ್ ರಕ್ಷಿಸಿ
ನಮ್ಮ 108 ಆಂಬುಲೆನ್ಸ್ ಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಮಾಫಿಯಾಗಳ ಜತೆ ಕೈಜೋಡಿಸುವುದನ್ನು ತಪ್ಪಿಸಬೇಕು. ಆಂಬುಲೆನ್ಸ್ ಚಾಲಕರು ಖಾಸಗಿ ಆಸ್ಪತ್ರೆಗಳ ಜತೆ ಸೇರಿಕೊಂಡು ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ ಎಂಬ ಅನೇಕ ದೂರುಗಳನ್ನು ಕೇಳಿದ್ದೇನೆ. ಈ ಮಾಫಿಯಾ ತಪ್ಪಿಸಬೇಕು. ಇತ್ತೀಚೆಗಷ್ಟೇ ನೂರಾರೂ ಆಂಬುಲೆನ್ಸ್ ಗಳನ್ನು ಪರಿಚಯಿಸಲಾಗಿತ್ತು. ಇಂತಹ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆರೋಗ್ಯ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿರುವುದು ನಮ್ಮ ಸರ್ಕಾರದ ಹೆಮ್ಮೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಹೇಗೆ ಕೆಲಸ ಮಾಡುತ್ತೇವೆ ಎಂಬುದು ಮುಖ್ಯ ಎಂದು ಇದೇ ವೇಳೆ ಹೇಳಿದರು.

ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು,  ಟೆಲಿ ಐಸಿಯು ಸೇವೆಯನ್ನು ಈಗಾಗಲೇ ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಜಾರಿಗೆ ತರಲಾಗಿದ್ದು, ಈಗ ಬೆಂಗಳೂರಿನ ವಿಕ್ಟೋರಿಯಾ ಹಾಗೂ ಬಳ್ಳಾರಿ ವೈದ್ಯಕೀಯ ಕಾಲೇಜಿನಲ್ಲಿ ಆರಂಭಿಸಲಾಗಿದೆ. ಒಟ್ಟು ನಾಲ್ಕು ಸರ್ಕಾರಿ ವೈದ್ಯಕೀಯ ಸಂಸ್ಥೆಗಳನ್ನು ಹಬ್‌ಗಳಾಗಿ ರಚಿಸಲಾಗಿದ್ದು, ಇವುಗಳಿಗೆ 41 ತಾಲೂಕು ಆಸ್ಪತ್ರೆಗಳನ್ನು ಜೋಡಣೆ ಮಾಡಲಾಗಿದೆ. ಈ ಆಸ್ಪತ್ರೆಗಳಲ್ಲಿ 10 ಟೆಲಿ ಐಸಿಯು ಬೆಡ್‌ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ನೆರವಿನಿಂದ ತಜ್ಞ ವೈದ್ಯರ ಸಲಹೆ ಪಡೆದು ರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com