ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಯುವಕರ ತಂಡ ಧರ್ಮಸ್ಥಳದಲ್ಲಿ ಸೆರೆ

ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ. ಯುವಕರ ತಂಡ ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್​ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಬಂಧಿತ ಆರೋಪಿಯಾಗಿದ್ದು, ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಒಳಗೊಂಡಿದ್ದಾನೆ.

ಆರೋಪಿ ಅಕ್ಬರ್​ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್​ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com