ʼಹಿಂದುʼ ಅಶ್ಲೀಲ ಎಂದಿದ್ದ ಸತೀಶ್ ಜಾರಕಿಹೊಳಿಗೆ ಸಂಕಷ್ಟ; ಕ್ರಿಮಿನಲ್‌ ಕೇಸ್‌ಗೆ ನ್ಯಾಯಾಲಯ ಒಪ್ಪಿಗೆ

ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ (word Hindu means obscene) ಎಂಬ ಹೇಳಿಕೆ ನೀಡಿದ್ದ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಕ್ರಿಮಿನಲ್ ಮೊಕದ್ದಮೆ (Criminal Case) ದಾಖಲು ಮಾಡಲು ಜನಪ್ರತಿನಿಧಿಗಳ ನ್ಯಾಯಾಲಯ (Court of Representatives) ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ.
ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ (word Hindu means obscene) ಎಂಬ ಹೇಳಿಕೆ ನೀಡಿದ್ದ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಕ್ರಿಮಿನಲ್ ಮೊಕದ್ದಮೆ (Criminal Case) ದಾಖಲು ಮಾಡಲು ಜನಪ್ರತಿನಿಧಿಗಳ ನ್ಯಾಯಾಲಯ (Court of Representatives) ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ 2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರು, ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಮಾತನಾಡಿದ್ದರು. ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿದ್ದರು. ಇದರ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಟೀಕೆ, ಆಕ್ರೋಶಗಳು ವ್ಯಕ್ತವಾಗಿದ್ದವು. 

ಈ ಸಂಬಂಧ ಬಿಜೆಪಿ ನಾಯಕರು, ಹಿಂದು ಕಾರ್ಯಕರ್ತರು, ರಾಜ್ಯದ ಹಲವು ಕಡೆ ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ವಕೀಲ ದಿಲೀಪ್‌ ಕುಮಾರ್ ಅವರು ಕೋರ್ಟ್‌ ಮೊರೆ ಹೋಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಈಗ ಸತೀಶ್‌ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶ ನೀಡಿದೆ. ನ್ಯಾಯಾದೀಶೆ ಜೆ ಪ್ರೀತ್ ಅವರಿಂದ ಆದೇಶ ನೀಡಲಾಗಿದೆ. ಹೀಗಾಗಿ ಸತೀಶ್‌ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ. 

ಜಾರಕಿಹೊಳಿ ಏನು ಹೇಳಿದ್ದರು?
ಬೆಳಗಾವಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಮಾತನಾಡಿದ್ದರು. 'ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆ. ಹಿಂದುತ್ವ ಎಂಬುದು ಪರ್ಷಿಯನ್ ಪದವಾಗಿದ್ದು, ಅದಕ್ಕೂ ಭಾರತಕ್ಕೂ ಏನು ಸಂಬಂಧ ಹೇಳಿ? ನಾವು ಹಿಂದೂಗಳು ಎಂದು ಬೀಗುವ ಯುವಕರು ಗೂಗಲ್, ವಿಕಿಪೀಡಿಯಾದಲ್ಲಿ ಹಿಂದೂ ಎಂಬ ಪದದ ಅರ್ಥ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಆ ಪದದನಿಜವಾದ ಅರ್ಥ ಗೊತ್ತಾದಾಗ, ಅವರಿಗೆ ಹಿಂದುತ್ವ ನಮ್ಮದಲ್ಲ ಎಂದು ತಿಳಿಯುತ್ತದೆ. ಆಗ ಅದನ್ನು ಪೂಜ್ಯನೀಯ ಭಾವದಿಂದ ನೋಡುವುದನ್ನು ಬಿಡುತ್ತಾರೆ ಎಂದು ಹೇಳಿದ್ದರು.

ಸ್ಪಷ್ಟನೆ
ಹಿಂದು ಪದಕ್ಕೆ ಪರ್ಷಿಯನ್‌ ಡಿಕ್ಷ್‌ನರಿಯಲ್ಲಿ ನೀಡಿರುವ ಕೀಳು ಅರ್ಥವನ್ನು ಹುಡುಕಿಕೊಟ್ಟಿದ್ದಕ್ಕೆ ಬಿಜೆಪಿಯವರು ನನಗೆ ಕೃತಜ್ಞರಾಗಿರಬೇಕು ಎಂದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ. ಹಿಂದು ಪದದ ಕುರಿತು ಭಾಷಣದ ವಿಡಿಯೋ ಎಲ್ಲೆಡೆ ಹರಿದಾಡಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಆಕ್ಷೇಪ ವ್ಯಕ್ತಪಡಿಸಿದ್ದರು. ದೇಶಾದ್ಯಂತ ವಿವಾದ ಹೆಚ್ಚಾಗುತ್ತಿರುವುದರಿಂದ ಒಂದು ಸ್ಪಷ್ಟನೆ ನೀಡುವಂತೆ ಸುರ್ಜೆವಾಲ ದೂರವಾಣಿ ಕರೆ ಮಾಡಿ ಹೇಳಿದ್ದರಿಂದ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com