ಬೆಂಗಳೂರಿನ ಐಐಎಸ್ಸಿ ಕೇಂದ್ರೀಯ ವಿದ್ಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇ ಮೇಲ್: ಪೊಲೀಸರಿಂದ ತನಿಖೆ

ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಬಂದಿದೆ. Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕೇಂದ್ರೀಯ ವಿದ್ಯಾಲಯ ಐಐಎಸ್ಸಿ
ಕೇಂದ್ರೀಯ ವಿದ್ಯಾಲಯ ಐಐಎಸ್ಸಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲೆಗೆ ಇ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಬಂದಿದೆ. Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಬೆಂಗಳೂರಿನ ಯಶವಂತಪುರದಲ್ಲಿರುವ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಜನವರಿ 28ರಂದು ಬಾಂಬ್ ಬೆದರಿಕೆ ಬಂದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರು ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇ ಮೇಲ್ ನಲ್ಲಿ ಏನಿದೆ?: ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೀವಿ. ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಇ ಮೇಲ್ ನಲ್ಲ ಬೆದರಿಕೆ ಹಾಕಲಾಗಿದೆ. ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಅಲರ್ಟ್ ಆಗಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದೆ. ಸದ್ಯ ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಳೆದ ವರ್ಷಾಂತ್ಯದಲ್ಲಿ ಕೂಡ ಇದೇ ರೀತಿ ಕಿಡಿಗೇಡಿಗಳು ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿ ಭಯದ ವಾತಾವರಣ ಸೃಷ್ಟಿಸಿದ್ದರು. ಇ ಮೇಲ್ ನಲ್ಲಿ ಶಾಲಾ ಕ್ರೀಡಾಂಗಣ, ಆವರಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಬರೆಯಲಾಗಿತ್ತು. ಇದು ಭಾರೀ ಸುದ್ದಿ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com