ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ 'ಕ್ಯಾನ್ ವಾಕ್' ಜಾಗೃತಿ ನಡಿಗೆ ಕಾರ್ಯಕ್ರಮಕ್ಕೆ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯ
ವಿಶ್ವ ಕ್ಯಾನ್ಸರ್ ದಿನ: ಆರೋಗ್ಯ ಇಲಾಖೆಯಿಂದ ಬೆಂಗಳೂರಿನಲ್ಲಿ ಜಾಗೃತಿ ಅರಿವು ಮೂಡಿಸಲು ವಾಕಥಾನ್
ಇಂದು ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡಿತ್ತು. ಜಾಥಾದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಿತ್ರನಟರು, ಅಧಿಕಾರಿಗಳು, ಹಲವು ಕ್ಷೇತ್ರಗಳ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಬೆಂಗಳೂರು: ಇಂದು ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡಿತ್ತು. ಜಾಥಾದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಿತ್ರನಟರು, ಅಧಿಕಾರಿಗಳು, ಹಲವು ಕ್ಷೇತ್ರಗಳ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು, ಕ್ಯಾನ್ಸರ್ ತಡೆಗಟ್ಟಲು ಮತ್ತು ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದೆ. ಕ್ಯಾನ್ಸರ್ ರೋಗವನ್ನು ಶೀಘ್ರ ಗುರುತಿಸಿದರೆ ಸೂಕ್ತ ಚಿಕಿತ್ಸೆ ಒದಗಿಸಿ ಗುಣಪಡಿಸಬಹುದು.
ಕ್ಯಾನ್ಸರ್ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಿ ಅವರಲ್ಲಿ ಜೀವನೋತ್ಸಾಹ ತುಂಬುವುದು ಅಗತ್ಯವಾಗಿದೆ. ʼಆರೈಕೆಯ ಅಂತರವನ್ನು ಕಡಿಮೆಗೊಳಿಸಿʼ ಎನ್ನುವ ಘೋಷವಾಕ್ಯದೊಂದಿಗೆ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸಿ ಕ್ಯಾನ್ಸರ್ ಮುಕ್ತ ಭಾರತ ನಿರ್ಮಾಣ ಮಾಡೋಣ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

