ಆನೆ ಶಿಬಿರಗಳಲ್ಲಿ ಸ್ಥಳಾವಕಾಶದ ಕೊರತೆ: ಅಸಹಾಯಕ ಸ್ಥಿತಿಯಲ್ಲಿ ಅರಣ್ಯ ಇಲಾಖೆ!

ಕಳೆದ ಕೆಲವು ತಿಂಗಳುಗಳಿಂದ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಘಟನೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಕಾರ್ಯಾಚರಣೆಗಳಿಗೆ ರಾಜ್ಯದ ಆನೆಗಳಿಗೆ ಬೇಡಿಕೆಗಳೂ ಕೂಡ ಹೆಚ್ಚಾಗುತ್ತಿದೆ. ಆದರೆ. ನೆರವಿನ ಹಸ್ತ ಚಾಚುವ ಸ್ಥಿತಿಯಲ್ಲಿ ರಾಜ್ಯ ಅರಣ್ಯ ಇಲಾಖೆ ಇಲ್ಲ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಘಟನೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಕಾರ್ಯಾಚರಣೆಗಳಿಗೆ ರಾಜ್ಯದ ಆನೆಗಳಿಗೆ ಬೇಡಿಕೆಗಳೂ ಕೂಡ ಹೆಚ್ಚಾಗುತ್ತಿದೆ. ಆದರೆ. ನೆರವಿನ ಹಸ್ತ ಚಾಚುವ ಸ್ಥಿತಿಯಲ್ಲಿ ರಾಜ್ಯ ಅರಣ್ಯ ಇಲಾಖೆ ಇಲ್ಲ.

ಪುಂಡಾನೆಗಳ ಸೆರೆ ಹಿಡಿಯಲು ಕರ್ನಾಟಕ ಆನೆಗಳನ್ನು ಕುಮ್ಕಿಗಳಾಗಿ ಬಳಕೆ ಮಾಡಲಾಗುತ್ತದೆ. ಹೀಗಾಗಿ ಮಹಾರಾಷ್ಟ್ರ, ಗುಜರಾತ್, ಒಡಿಶಾ, ಮಧ್ಯಪ್ರದೇಶಗಳ ಸೇರಿದಂತೆ ಇತರೆ ರಾಜ್ಯಗಳಲ್ಲಿ ಕರ್ನಾಟಕ ಆನೆಗಳಿಗೆ ಬೇಡಿಕೆಗಳು ಹೆಚ್ಚಾಗಿವೆ.

ಅರ್ಜುನನ ಸಾವಿನ ಬಳಿಕ ಸ್ಥಳಾಂತರ ಕಾರ್ಯಾಚರಣೆಗಳನ್ನು ತಡ ಮಾಡಲಾಗುತ್ತಿದೆ. ಪ್ರಸ್ತುತ ನಮ್ಮಲ್ಲಿರುವ ಆನೆ ಶಿಬಿರಗಳಲ್ಲಿ ಸಾಕಷ್ಟು ಸ್ಥಳಾವಕಾಶಿಲ್ಲ. ಹೀಗಾಗಿ ಆನೆ ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದೇವೆ. ಪರಿಸ್ಥಿತಿ ಬಗ್ಗೆ ಸರ್ಕಾರದ ಗಮನಕ್ಕೂ ತರಲಾಗಿದೆ. ಸರ್ಕಾರದ ಮುಂದಿನ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಪುಂಡಾನೆಗಳ ಸೆರೆಹಿಡಿಯಲು ನಮಗೂ ಬಲಿಷ್ಠ ಆನೆಗಳ ಅಗತ್ಯವಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಜ್ಯದ ಆನೆಗಳಿಗೆ ಬೇಡಿಕೆಗಳು ಬರುತ್ತಲೇ ಇವೆ. ಆದರೂ, ಮೃಗಲಾಯದಲ್ಲಿರುವ ಹಾಗೂ ಸೆರೆ ಹಿಡಿದ ಆನೆಗಳನ್ನು ನಾವು ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.

ಮಾನವ-ಪ್ರಾಣಿ ಸಂಘರ್ಷ ಮತ್ತು ಅರಣ್ಯೀಕರಣ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಕೆಲ ದಿನಗಳ ಹಿಂದಷ್ಟೇ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು.

ಸಭೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ನಿವಾರಣೆ, ಆನೆಗಳನ್ನು ಸೆರೆಹಿಡಿಯಲು, ಸ್ಥಳಾಂತರಿಸುವ ಕುರಿತು ಅಧಿಕಾರಿಗಳಿಗೆ ಒತ್ತಾಯಿಸಿದರು. ಈ ವೇಳೆ ಕಾರ್ಯಾಚರಣೆ ನಡೆಸಲು ಇರುವ ಸಂಕಷ್ಟಗಳನ್ನು ಅಧಿಕಾರಿಗಳು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com