ಬೆಂಗಳೂರು: ಸ್ನೇಹಿತನನ್ನು ರಕ್ಷಿಸಲು ಬಂದ ವ್ಯಕ್ತಿಗೂ ಚೂರಿ ಇರಿದು ಇಬ್ಬರ ಬರ್ಬರ ಹತ್ಯೆ

ನಗರದ ಕುಂಬಾರಪೇಟೆಯ ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಕುಂಬಾರಪೇಟೆಯ ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ. 

ಮೃತರನ್ನು ಸುರೇಶ್, ಮಹೇಂದ್ರ ಎಂದು ಗುರುತಿಸಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಆರೋಪಿಗಳು ಸುರೇಶ್ ಎಂಬುವರನ್ನು ಹತ್ಯೆ ಮಾಡಲು ಬಂದಿದ್ದರು. ಸುರೇಶ್ ಮೇಲೆ ದಾಳಿ ನಡೆಸುತ್ತಿದ್ದಾಗ ಬಿಡಿಸಲು ಬಂದ ಮಹೇಂದ್ರ ಎಂಬುವರ ಮೇಲೂ ಕಿಡಿಗೇಡಿಗಳು ದಾಳಿ ಮಾಡಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ.

ಇಬ್ಬರು ಕೊಲೆಯಾಗಿರುವ ಬಗ್ಗೆ ಮಾಹಿತಿ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಸುರೇಶ್ ಮತ್ತು ಮಹೇಂದ್ರ ಇಬ್ಬರು ಅಡುಗೆ ಉಪಕರಣಗಳನ್ನು ಮಾರಾಟ ಮಾಡುತ್ತಿದ್ದರು. ಕೊಲೆ ಕುರಿತಂತೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ಬಳಿಕ ಕೊಲೆಗೆ ನಿಖರ ಕಾರಣ ತಿಳಿಯಲಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com