ನಳಿನ್ ಕುಮಾರ್ ಕಟೀಲ್ ಮನೆ ಮುತ್ತಿಗೆಗೆ ಯತ್ನ; ಎನ್ಎಸ್'ಯುಐ ಕಾರ್ಯಕರ್ತರು ವಶಕ್ಕೆ

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದ್ದು, ಸಂಸದನಾಗಿ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಆರೋಪಿಸಿ ಎನ್ಎಸ್ ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನೆಗೆ ಮುತ್ತಿಗೆ ಯತ್ನ ನಡೆಸಿದ್ದು, ಈ ವೇಳೆ ಹಲವರನ್ನು....
ಎನ್ಎಸ್'ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆಯುತ್ತಿರುವುದು.
ಎನ್ಎಸ್'ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆಯುತ್ತಿರುವುದು.

ಮಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದ್ದು, ಸಂಸದನಾಗಿ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಆರೋಪಿಸಿ ಎನ್ಎಸ್ ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನೆಗೆ ಮುತ್ತಿಗೆ ಯತ್ನ ನಡೆಸಿದ್ದು, ಈ ವೇಳೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಳಿನ್ ಕುಮಾರ್ ಕಟೀಲ್ ವಿರುದ್ಧ ಘೋಷಣೆ ಕೂಗಿದ ಎನ್‍ಎಸ್‍ಯುಐ ಕಾರ್ಯಕರ್ತರು ಕಟೀಲ್ ಅವರ ಮನೆ ಮುಂದೆ ಭಾರೀ ಹೈಡ್ರಾಮಾ ಮಾಡಿದರು. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಕಟೀಲ್ ಮನೆಗೆ ನುಗ್ಗಲು ಕಾರ್ಯಕರ್ತರು ಯತ್ನ ನಡೆಸಿದರು.

ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಎನ್‍ಎಸ್‍ಯುಐ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದುಕೊಂಡರು. ಘಟನೆ ಬಳಿಕ ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್‌ ಮೆಂಟ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com