ಮಹಿಳಾ ದೂರುದಾರರಿಗೆ ಮಾನಸಿಕ ಕಿರುಕುಳ: ಪೊಲೀಸ್ ಅಮಾನತು

ದೂರು ನೀಡಲು ಠಾಣೆಗೆ ಬಂದ ಮಹಿಳೆಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಲ್ಲಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ದೂರು ನೀಡಲು ಠಾಣೆಗೆ ಬಂದ ಮಹಿಳೆಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಲ್ಲಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ.

ಹೆಡ್ ಕಾನ್‌ಸ್ಟೆಬಲ್ ಸಂತೋಷ್ ತನ್ನ ಮೊಬೈಲ್‌ಗೆ ಬೆದರಿಕೆ ಮತ್ತು ನಿಂದನೀಯ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಪೇದೆಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಹಿಳೆ ಠಾಣೆಗೆ ಬಂದಾಗ ಆಕೆಯ ಮೊಬೈಲ್ ನಂಬರ್ ಸೇವ್ ಮಾಡಿಕೊಂಡಿದ್ದ ಪೊಲೀಸ್ ಪೇದೆ ಬಳಿಕ ನಂತರ ಅವಾಚ್ಯ ಸಂದೇಶಗಳನ್ನು ರವಾನಿಸಿ ಚಿತ್ರಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ಅಲ್ಲದೇ ತನ್ನ ವಿರುದ್ಧ ದೂರು ನೀಡಿದರೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಚಿತ್ರಹಿಂಸೆಯನ್ನು ಸಹಿಸಲಾಗದೆ ಮಹಿಳೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಇದೀಗ ಆರೋಪಿ ಪೇದೆಯನ್ನು ಅಮಾನತು ಮಾಡಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com