ಮೈಸೂರಿನಲ್ಲಿ 'ದಿಲ್ಲಿ ಹಾತ್' ಮಾದರಿಯ ಶಾಶ್ವತ ವಸ್ತುಪ್ರದರ್ಶನ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಅಸ್ತು

ರಾಜ್ಯದ ಉತ್ಪನ್ನಗಳನ್ನು ಪ್ರದರ್ಶಿಸಲು ಮೈಸೂರಿನಲ್ಲಿ ದಿಲ್ಲಿ ಹಾತ್ ಮಾದರಿಯಲ್ಲಿ ಶಾಶ್ವತ ವಸ್ತುಪ್ರದರ್ಶನ ಕೇಂದ್ರವನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ಹೇಳಿದ್ದಾರೆ.
ದಿಲ್ಲಿ ಹಾತ್
ದಿಲ್ಲಿ ಹಾತ್

ಬೆಂಗಳೂರು: ರಾಜ್ಯದ ಉತ್ಪನ್ನಗಳನ್ನು ಪ್ರದರ್ಶಿಸಲು ಮೈಸೂರಿನಲ್ಲಿ ದಿಲ್ಲಿ ಹಾತ್ ಮಾದರಿಯಲ್ಲಿ ಶಾಶ್ವತ ವಸ್ತುಪ್ರದರ್ಶನ ಕೇಂದ್ರವನ್ನು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಗುರುವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್‌ಕೆ ಪಾಟೀಲ್ ಅವರು, 'ಒಂದು ಜಿಲ್ಲೆ, ಒಂದು ಉತ್ಪನ್ನ' ಯೋಜನೆಯಡಿ, ಕೇಂದ್ರ ಸರ್ಕಾರ  ನೀಡುವ ಬಡ್ಡಿ ರಹಿತ ಸಾಲವನ್ನು ಬಳಸಿಕೊಂಡು 193 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರಿನಲ್ಲಿ ಇಂಡಿಯಾ ಯೂನಿಟಿ ಮಾಲ್ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದರು.

ಮೈಸೂರಿನಲ್ಲಿರುವ 6.5 ಎಕರೆ ವಸ್ತುಪ್ರದರ್ಶನ ಭೂಮಿಯಲ್ಲಿ ಯೂನಿಟಿ ಮಾಲ್ ಯೋಜನೆಯನ್ನು ಸಣ್ಣ ಕೈಗಾರಿಕೆ ಇಲಾಖೆ ಕೈಗೆತ್ತಿಕೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.

ಸಾಮಾಜಿಕ ನ್ಯಾಯ
ಕರ್ನಾಟಕ ಸಹಕಾರಿ ತಿದ್ದುಪಡಿ 2024 ರ ಅಡಿಯಲ್ಲಿ, ರಾಜ್ಯ ಸರ್ಕಾರವು ಮೀಸಲಾತಿಯೊಂದಿಗೆ ಸಾಮಾಜಿಕ ನ್ಯಾಯವನ್ನು ತರಲಿದೆ. ಇದನ್ನು 25,000 ಸಹಕಾರಿ ಸಂಘಗಳಲ್ಲಿ ಮೀಸಲಾತಿ ರೋಸ್ಟರ್ ಆಧಾರದ ಮೇಲೆ ಜಾರಿಗೊಳಿಸಲಾಗುವುದು ಎಂದು ಎಚ್ ಕೆ ಪಾಟೀಲ್ ಅವರು ಹೇಳಿದ್ದಾರೆ.

ಕೆಲವು ಸಹಕಾರಿ ಸಂಸ್ಥೆಗಳಲ್ಲಿ ಈಗಾಗಲೇ ಮೀಸಲಾತಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಇದು ಸಮಗ್ರವಾಗಿ ಜಾರಿಯಾಗಿಲ್ಲ ಮತ್ತು ಕೆಲವರಿಗೆ ಸ್ವಲ್ಪ ಮೀಸಲಾತಿ ನೀಡಿಲಾಗಿದೆ. ಈಗ ಎಸ್‌ಸಿ/ಎಸ್‌ಟಿಗಳು, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗೆ ಮೀಸಲಾತಿ ಇರುತ್ತದೆ ಎಂದು ಅವರು ತಿಳಿಸಿದರು.

ಇನ್ನು ಸೂಪರ್ ಟೈಮ್ ಸ್ಕೇಲ್‌ನಲ್ಲಿ ಸುಮಾರು 45 ಹುದ್ದೆಗಳನ್ನು ಪರಿಗಣಿಸಿ, ರಾಜ್ಯ ಸರ್ಕಾರ ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ಅವಕಾಶಗಳನ್ನು ಹೆಚ್ಚಿಸಿದೆ. ಆಯ್ಕೆ ಶ್ರೇಣಿಗಾಗಿ 13 ವರ್ಷ ಕಾಯಬೇಕಾದವರಿಗೆ ಒಂದು ವರ್ಷ ಪೂರ್ಣಗೊಂಡ ನಂತರ ತಾತ್ಕಾಲಿಕವಾಗಿ ಅವಕಾಶ ಕಲ್ಪಿಸಲಾಗುವುದು. ಇದು ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುವುದಿಲ್ಲ. ಆದರೆ ಕೆಎಎಸ್ ಅಧಿಕಾರಿಗಳಿಗೆ ಹೆಚ್ಚಿನ ಅವಕಾಶಗಳನ್ನು ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ಕತ್ತಿ, ದಡ್ಡಿ, ಹುಕ್ಕೇರಿ, ಗೋಕಾಕ ಮತ್ತು ಪಾಚಾಪುರದಲ್ಲಿ ನೀರು ಸರಬರಾಜು ಮೂಲಭೂತ ಸೌಕರ್ಯಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರಿನ ಹೊರವಲಯದ ಬಿಡದಿಯಲ್ಲಿ ಮಹಿಳೆಯರಿಗಾಗಿ 10.5 ಕೋಟಿ ರೂಪಾಯಿ ವೆಚ್ಚದಲ್ಲಿ ಜಂಟಿ ಸಹಭಾಗಿತ್ವದಲ್ಲಿ ಡ್ರೈವಿಂಗ್ ಕಲಿಕಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com