ನಿರ್ವಹಣೆ ಕಾಮಗಾರಿ: ಫೆ.11ರಂದು ಎರಡು ಗಂಟೆಗಳ ಕಾಲ ಈ ಮಾರ್ಗದಲ್ಲಿ ಮೆಟ್ರೊ ಸಂಚಾರ ಸ್ಥಗಿತ

ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಭಾನುವಾರ ಅಂದರೆ ಫೆಬ್ರವರಿ 11ರಂದು ಎರಡು ಗಂಟೆ ಸಮಯ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಭಾನುವಾರ ಅಂದರೆ ಫೆಬ್ರವರಿ 11ರಂದು ಎರಡು ಗಂಟೆ ಸಮಯ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಎಂಆರ್​ಸಿಎಲ್ ಮಾಧ್ಯಮ ಪ್ರಕಟಣೆ ತಿಳಿಸಿದೆ. 

ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಬೆಳಗ್ಗೆ  7 ಗಂಟೆಯಿಂದ ಎಂದಿನಂತೆ ಸಂಚರಿಸಲಿದೆ. ಬೆಳಗ್ಗೆ 9 ಗಂಟೆಯ ನಂತರ ವೈಟ್‌ ಫೀಲ್ಡ್ (ಕಾಡುಗೋಡಿ) ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಇರುತ್ತವೆ.  

ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಇರುತ್ತವೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com