ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ನಿಜಲಿಂಗಪ್ಪ ಬಡಾವಣೆಯ ಕಾಂಗ್ರೆಸ್ ಮುಖಂಡ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ಇಲ್ಲಿನ ಬಡಾವಣೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1) (ಸಿ), 505 (2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೆಎಸ್ ಈಶ್ವರಪ್ಪ ನೀಡಿರುವ ಹೇಳಿಕೆ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆ ಉಂಟುಮಾಡುತ್ತದೆ. ಗಲಭೆಗಳು ಜರುಗಬಹುದೆಂದು ಗೊತ್ತಿದ್ದರೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹನುಮಂತ ದೂರು ನೀಡಿದ್ದರು.
Advertisement