ಚಕ್ರವರ್ತಿ ಸೂಲಿಬೆಲೆ(ಸಂಗ್ರಹ ಚಿತ್ರ)
ಚಕ್ರವರ್ತಿ ಸೂಲಿಬೆಲೆ(ಸಂಗ್ರಹ ಚಿತ್ರ)

SSLC ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮುಸ್ಲಿಮರ ತುಷ್ಠೀಕರಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದ ಖ್ಯಾತ ಭಾಷಣಕಾರ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿಆರ್​ಪಿಸಿ ಕಲಂ 157 ಅಡಿ ಎಫ್​ಐಆರ್ ದಾಖಲಾಗಿದೆ. 
Published on

ಶಿವಮೊಗ್ಗ: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿದ್ದ ಖ್ಯಾತ ಭಾಷಣಕಾರ, ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿಆರ್​ಪಿಸಿ ಕಲಂ 157 ಅಡಿ ಎಫ್​ಐಆರ್ ದಾಖಲಾಗಿದೆ. 

ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ(SSLC exam time table) ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಎನ್​ಎಸ್​ವಿ ಸದಸ್ಯರು ದೂರು ನೀಡಿದ್ದರು. 

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಸಮಯಾವಕಾಶ ನೀಡಲು ಬೆಳಗ್ಗಿನ ಪರೀಕ್ಷೆಗಳನ್ನು ಮಧ್ಯಾಹ್ನದ ನಂತರ ನಿಗದಿ ಮಾಡಲಾಗಿದೆ. ಪರೀಕ್ಷಾ ವೇಳಾಪಟ್ಟಿ ಹಂಚಿಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ, ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗಿನ ಅವಧಿಯಲ್ಲಿ ನಡೆಯಲಿದೆ. ಶುಕ್ರವಾರ ಮಾತ್ರ ಏಕೆ ಮಧ್ಯಾಹ್ನದ ನಂತರ ಎಂದು ಪ್ರಶ್ನಿಸಿದ್ದರು. ಅಲ್ಲದೆ, ನಮಾಜ್​ಗೆ ಸಮಯವೇ ಎಂದು ಪ್ರಶ್ನಿಸಿದ್ದರು.

ಪರೀಕ್ಷಾ ಮಂಡಳಿ ಏನು ಹೇಳಿದೆ?: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಸ್ಪಷ್ಟನೆ ನೀಡಿದ ಪರೀಕ್ಷಾ ಮಂಡಳಿ, ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ಬೆಳಗ್ಗೆ ನಡೆಯುವ ಕಾರಣ ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಮಾಡಲಾಗಿದೆ. ನಮಾಜ್​ಗೆ ಅನುಕೂಲ ಮಾಡಿಕೊಡಲು ಮಧ್ಯಾಹ್ನ ಪರೀಕ್ಷೆ ನಡೆಸುತ್ತಿಲ್ಲ ಎಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಸ್ಪಷ್ಟನೆ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com