ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ; ಇಬ್ಬರ ಬಂಧನ, 57,000 ರೂ. ಮೌಲ್ಯದ ಡ್ರಗ್ಸ್ ವಶ

ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಂದೇಲ್ ಮೈದಾನದಲ್ಲಿ ಮಂಗಳೂರು ಉತ್ತರ ವಿಭಾಗದ ಡ್ರಗ್ ಸ್ಕ್ವಾಡ್ ಶುಕ್ರವಾರ ಬಂಧಿಸಿದೆ. ಬಂಧಿತರಿಂದ  57,000 ರೂಪಾಯಿ ಮೌಲ್ಯದ 19 ಗ್ರಾಂ ಡ್ರಗ್ಸ್ ನ್ನು ವಶಕ್ಕೆ ಪಡೆಯಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರನ್ನು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಂದೇಲ್ ಮೈದಾನದಲ್ಲಿ ಮಂಗಳೂರು ಉತ್ತರ ವಿಭಾಗದ ಡ್ರಗ್ ಸ್ಕ್ವಾಡ್ ಶುಕ್ರವಾರ ಬಂಧಿಸಿದೆ. ಬಂಧಿತರಿಂದ  57,000 ರೂಪಾಯಿ ಮೌಲ್ಯದ 19 ಗ್ರಾಂ ಡ್ರಗ್ಸ್ ನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರನ್ನು ಮಂಗಳೂರಿನ ಹಿಮಾ ನೀಶ್ (26) ಮತ್ತು ಕೋಟೆಕಾರು ತಾರೆಪಡ್ಪು ನಿವಾಸಿ ಪವನ್ ರಾಜ್ (28) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಡ್ರಗ್ ಸ್ಕ್ವಾಡ್ ನಡೆಸಿದ ಕಾರ್ಯಾಚರಣೆಯಲ್ಲಿ ಪ್ಲಾಸ್ಟಿಕ್ ಕವರ್‌ಗಳಲ್ಲಿ ಬಚ್ಚಿಟ್ಟಿದ್ದ ಡ್ರಗ್ಸ್  ಪತ್ತೆಯಾಗಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಡಿಸಿಪಿಗಳಾದ ಸಿದ್ದಾರ್ಥ ಮತ್ತು ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ) ಮಾರ್ಗದರ್ಶನದಲ್ಲಿ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದಲ್ಲಿ ಬಂಧನ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com