ರೈತರ ಅನುಕೂಲಕ್ಕಾಗಿ ಕಿಸಾನ್ ಸಮ್ಮಾನ್ ಯೋಜನೆ ಮರು ಜಾರಿಗೊಳಿಸಿ: ಬಿ.ಎಸ್ ಯಡಿಯೂರಪ್ಪ ಆಗ್ರಹ

ಬರಗಾಲ ಕಾಡುವ ಸಂದರ್ಭದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ರೈತರು ಮುಂದಿನ ಭವಿಷ್ಯದ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೊಡುತ್ತಿದ್ದ ಹಣ ಈಗಿನ ಸರ್ಕಾರ ನಿಲ್ಲಿಸಿರುವುದು ಖಂಡನೀಯ.
ಯಡಿಯೂರಪ್ಪ
ಯಡಿಯೂರಪ್ಪ

ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲದ ವಾತಾವರಣ ಇದೆ. ಕುಡಿಯುವ ನೀರಿನ ಹಾಹಾಕಾರ ಬರುವ ಸಂಭವ ಇದೆ. ಬರಗಾಲ ಕಾಡುವ ಸಂದರ್ಭದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ರೈತರು ಮುಂದಿನ ಭವಿಷ್ಯದ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೊಡುತ್ತಿದ್ದ ಹಣ ಈಗಿನ ಸರ್ಕಾರ ನಿಲ್ಲಿಸಿರುವುದು ಖಂಡನೀಯ. ಈ ಕೂಡಲೇ ಈ ಯೋಜನೆ ಮರು ಜಾರಿ ಮಾಡಬೇಕು ಎಂದು ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ರೈತರಿಗೆ ಕೇಂದ್ರ ಸರ್ಕಾರ 6 ಸಾವಿರ ನೀಡಿದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ  4 ಸಾವಿರ ಸೇರಿಸಿ ಒಟ್ಟು  10 ಸಾವಿರ ಕೊಡುತ್ತಿತ್ತು. ಇಂದಿನ ರಾಜ್ಯ ಸರ್ಕಾರ ಅದನ್ನು ನಿಲ್ಲಿಸಿದೆ. ಸಂಕಷ್ಟದ ಸಂದರ್ಭದಲ್ಲಿ ಪ್ರೋತ್ಸಾಹ ಧನ ನೀಡಬೇಕು’ ಎಂದು ಒತ್ತಾಯಿಸಿದರು.

ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಜಗತ್ತಿನಾದ್ಯಂತ ಹಿಂದೂ ಧರ್ಮ ಎಲ್ಲರ ಆಶಾಕಿರಣವಾಗುತ್ತಿದೆ. ಸುತ್ತೂರು ಶ್ರೀಗಳು ದೇಶದ ಉದ್ದಗಲಕ್ಕೂ ಶಿಕ್ಷಣ ನೀಡುತ್ತಾ ಬಂದಿದ್ದಾರೆ. ಮಠ ಮಾನ್ಯಗಳು ಗ್ರಾಮೀಣ ಭಾಗದ ಜನರಿಗೆ ನೀಡುತ್ತಿರುವ ಶಿಕ್ಷಣ, ಅನ್ನ,ಆರೋಗ್ಯ ನೀಡುತ್ತ ಸರ್ಕಾರದ ಮೇಲಿನ ಜವಾಬ್ದಾರಿಯನ್ನ ಕಡಿಮೆ ಮಾಡುತ್ತಿವೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಮಠ ಮಾನ್ಯಗಳಿಗೆ ಸಾಕಷ್ಟು ಅನುದಾನ ನೀಡಿದ್ದೆ. ಪ್ರಧಾನಿ ಮೋದಿ ಅವರು ಒಂದು ಮಹತ್ತರ ನಿರ್ಧಾರ ಮಾಡಿದ್ದಾರೆ. 1 ಕೆ.ಜಿ ಅಕ್ಕಿಗೆ 29 ರೂ ನಂತೆ ಜನ ಸಾಮಾನ್ಯರಿಗೆ ನೀಡಲು ಮುಂದಾಗಿದ್ದಾರೆ. ಇಂದು 1ಕೆಜಿ ಅಕ್ಕಿಗೆ 50 ರಿಂದ 60 ರೂ ಆಗಿದೆ. ಜನರಿಗೆ ಕಡಿಮೆ ಬೆಲೆಯಲ್ಲಿ ಭಾರತ್ ರೈಸ್ ಎಂಬ ಬ್ರಾಂಡ್ ಅಡಿ ನೀಡಲು ನಿರ್ಧಾರ ಮಾಡಿದ್ದಾರೆ ಇದು ಒಳ್ಳೆಯ ಯೋಜನೆ. ಈ ಮೂಲಕ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ, ಇಂತಹ ಯೋಜನೆಗಳ ಕುರಿತು ಪ್ರಚಾರ ಮಾಡಬೇಕು. ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕು’ ಎಂದು ಕರೆ ನೀಡಿದರು.

ಹೆಣ್ಣು ಮಕ್ಕಳಿಗಾಗಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದ ದೇಶದಲ್ಲೇ ಮೊದಲಿಗರು ಎಂದು ಯಡಿಯೂರಪ್ಪ ಹೇಳಿದರು. ಶಿಕ್ಷಣ, ಆರೋಗ್ಯ ಮತ್ತು ನಿರ್ಗತಿಕರಿಗೆ ಆಹಾರ ಒದಗಿಸುವ ಮಠಗಳ ಕೊಡುಗೆಯನ್ನು ಶ್ಲಾಘಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com