ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜೀನಾಮೆ

ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್​ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. 
ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ಸಿ ರೆಡ್ಡಿ
ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ಸಿ ರೆಡ್ಡಿ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್​ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. 

ಆದರೆ ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.

ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು ಪೊಲೀಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com