ಪರಿವಾರ, ತಳವಾರ ಸಮುದಾಯ ಶೀಘ್ರದಲ್ಲೇ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ- ಸಿಎಂ ಸಿದ್ದರಾಮಯ್ಯ

ರಾಜ್ಯದ ವಿವಿಧೆಡೆ ನೆಲೆಸಿರುವ ಪರಿವಾರ, ತಳವಾರ ಸಮುದಾಯವನ್ನು ಶೀಘ್ರದಲ್ಲೇ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
Updated on

ಬೆಂಗಳೂರು: ರಾಜ್ಯದ ವಿವಿಧೆಡೆ ನೆಲೆಸಿರುವ ಪರಿವಾರ, ತಳವಾರ ಸಮುದಾಯವನ್ನು ಶೀಘ್ರದಲ್ಲೇ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿರುವ  ಪರಿವಾರ / ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಮ್ಮ‌ ಸರ್ಕಾರವು ತೀರ್ಮಾನಿಸಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿದ್ದು, ಸಮುದಾಯದ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲು ಸೂಚನೆ ನೀಡಿರುವುದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com