ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮಹಿಳೆ ಬಲಿ

ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮಹಿಳೆಯೊಬ್ಬರು ಬಲಿಯಾದ ದಾರುಣ ಘಟನೆ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಶನಿವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮಹಿಳೆಯೊಬ್ಬರು ಬಲಿಯಾದ ದಾರುಣ ಘಟನೆ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಶನಿವಾರ ನಡೆದಿದೆ.

ಆಶಾರಾಣಿ (62) ಮೃತ ಮಹಿಳೆಯಾಗಿದ್ದಾರೆ. ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ‌ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ.

ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಪತ್ತೆಯಾಗಿಲ್ಲ. ಅಪಘಾತ ಬಳಿಕ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com