ಗದಗ ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ; 38 ವಿದ್ಯಾರ್ಥಿಗಳ ಅಮಾನತು!

ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್‌) 38 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್.
ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್.

ಗದಗ: ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್‌) 38 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

ಜಿಲ್ಲಾಸ್ಪತ್ರೆಯನ್ನೇ ರೀಲ್ಸ್ ಸ್ಪಾಟ್ ಮಾಡಿಕೊಂಡಿದ್ದಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ 38 ಮಂದಿ ವಿದ್ಯಾರ್ಥಿಗಳಿಗೆ ಅಮಾನತು ಶಿಕ್ಷೆ ನೀಡಲಾಗಿದೆ.

ಆಸ್ಪತ್ರೆ ಕಾರಿಡಾರ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಾಡಿದ್ದ ರೀಲ್ಸ್ ಸಾಕಷ್ಟು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಜೀಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

ಎಂಬಿಬಿಎಸ್‌ ಇಂಟರ್ನ್‌ಶಿಪ್‌ ವಿದ್ಯಾರ್ಥಿಗಳು ಅನುಮತಿ ಪಡೆಯದೇ ಜಿಲ್ಲಾ ಆಸ್ಪತ್ರೆಯ ವಿವಿಧೆಡೆ ರೀಲ್ಸ್‌ ಮಾಡಿದ್ದಾರೆ. ಇದರ ಬಗ್ಗೆ ವಿಚಾರಿಸಿದಾಗ, ಏಪ್ರಿಲ್‌ನಲ್ಲಿ ಪದವಿ ಪೂರ್ಣಗೊಳ್ಳುವ ಸಂಭ್ರಮದಲ್ಲಿ ಯಾರಿಗೂ ತೊಂದರೆ ಆಗದಂತೆ ರೀಲ್ಸ್‌ ಮಾಡಿರುವುದಾಗಿ ತಿಳಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ರೀಲ್ಸ್‌ ಮಾಡಿದ್ದು ತಪ್ಪು. ಜಿಮ್ಸ್‍ನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಡಿಸ್ಟ್ರಿಕ್ಟ್ ಸರ್ಜನ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿಗಳನ್ನು ಅಮಾನತು ಮಾಡುವ ನಿರ್ಧಾರ ತೆಗೆದುಕೊಂಡಿದ್ದೇವೆಂದು ಜಿಮ್ಸ್ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com