ಸುತ್ತೂರು ಜಾತ್ರಾ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ
ಸುತ್ತೂರು ಜಾತ್ರಾ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ

ವಿಶ್ವ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಗೆ ಗೌರವ, ಪ್ರಧಾನಿ ಮೋದಿಗೆ ಕ್ರೆಡಿಟ್ ನೀಡಿದ ಅಮಿತ್ ಶಾ!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತಿತರ ಪ್ರಸಿದ್ಧ ಯಾತ್ರಾ ಕೇಂದ್ರಗಳ ಕುರಿತ ಪ್ರಚಾರವನ್ನು ಉದಾಹರಣೆಯಾಗಿ ಉಲ್ಲೇಖಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಶ್ವ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಯ ಗೌರವದ ಕ್ರೆಡಿಟ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ್ದಾರೆ.

ಮೈಸೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತಿತರ ಪ್ರಸಿದ್ಧ ಯಾತ್ರಾ ಕೇಂದ್ರಗಳ ಕುರಿತ ಪ್ರಚಾರವನ್ನು ಉದಾಹರಣೆಯಾಗಿ ಉಲ್ಲೇಖಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಶ್ವ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಯ ಗೌರವದ ಕ್ರೆಡಿಟ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ್ದಾರೆ.

ಇಲ್ಲಿಗೆ ಸಮೀಪದ 'ಸುತ್ತೂರು ಜಾತ್ರೆ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗ, ಆಯುರ್ವೇದ ಮತ್ತು ಭಾರತೀಯ ಭಾಷೆಗಳ ಸಂರಕ್ಷಣೆಯ ಪ್ರಚಾರದೊಂದಿಗೆ ದೇಶವನ್ನು ಸುಭದ್ರ ಮತ್ತು ಸಮೃದ್ಧಿಗೊಳಿಸುವ ಪ್ರಧಾನಿ ಕಾರ್ಯವನ್ನು ಶ್ಲಾಘಿಸಿದರು.

ನರೇಂದ್ರ ಮೋದಿ ಅವರು ವಿಶ್ವ ವೇದಿಕೆಯಲ್ಲಿ ದೇಶದ ಸಾಂಸ್ಕೃತಿಕ ಪರಂಪರೆಗೆ ಗೌರವ ತರುವ ಕೆಲಸ ಮಾಡಿದ್ದಾರೆ. ಅಯೋಧ್ಯೆಯ ರಾಮಮಂದಿರ, ಕಾಶಿಯ ಕಾಶಿ ವಿಶ್ವನಾಥ ಕಾರಿಡಾರ್, ಮಹಾಕಾಲ್ ಕಾರಿಡಾರ್ ಮತ್ತು ಕೇದಾರನಾಥ ಮತ್ತು ಬದರಿನಾಥ ಧಾಮದ ಪುನರುತ್ಥಾನದಂತಹ ನಮ್ಮ ಹಲವಾರು ಸಾಂಸ್ಕೃತಿಕ ಕೇಂದ್ರಗಳ ಪುನರುಜ್ಜೀವನಕ್ಕಾಗಿ ಮೋದಿಜಿ ಶ್ರಮಿಸಿದ್ದಾರೆ" ಎಂದು ಶಾ ಹೇಳಿದರು.

ನಂಜನಗೂಡು ತಾಲೂಕಿನ ಕಪಿಲಾ ನದಿಯ ದಡದಲ್ಲಿರುವ ಸುತ್ತೂರು ಮಠ ವೀರಶೈವ, ಲಿಂಗಾಯತ ನಂಬಿಕೆಯನ್ನು ಪ್ರಚಾರ ಮಾಡುವ ರಾಜ್ಯದ ಪ್ರಮುಖ ಆಧ್ಯಾತ್ಮಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖೆಯನ್ನು ತೆರೆಯುವ  ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರ ನಿರ್ಧಾರವನ್ನು ಶ್ಲಾಘಿಸಿದರು. 12ನೇ ಶತಮಾನದ ಸಮಾಜ ಸುಧಾರಕ ಹಾಗೂ ದಾರ್ಶನಿಕ ಬಸವೇಶ್ವರರಿಗೆ ನಮನ ಸಲ್ಲಿಸಿದ ಅವರು, ಸಮಾಜದ ಕಲ್ಯಾಣಕ್ಕಾಗಿ ಸುತ್ತೂರು ಮಠ ಮತ್ತು ಅದರ ದಾರ್ಶನಿಕರ ಕೊಡುಗೆಗಳನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಮಲಲ್ಲನ ವಿಗ್ರಹವನ್ನು ಪ್ರತಿಷ್ಠಾಪಿಸಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com