ರಾಯಚೂರು: ಕರ್ತವ್ಯ ನಿರತ ಹೆಡ್ ಕಾನ್‌ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರನಿಂದ ಹಲ್ಲೆ

ಕರ್ತವ್ಯನಿರತ‌ ಹೆಡ್ ಕಾನ್‌ಸ್ಟೆಬಲ್ ಮೇಲೆ‌ ಜೆಡಿಎಸ್ ಶಾಸಕಿ ಕರೆಮ್ಮ ಜೆ. ನಾಯಕ ಪುತ್ರ ಸಂತೋಷ, ಸಹೋದರ ತಿಮ್ಮರೆಡ್ಡಿ ಹಾಗೂ ಆಪ್ತ ಸಹಾಯಕ ಇಲಿಯಾಸ್ ಸೇರಿ 15ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಲ್ಲೆ ನಡೆಸಿದ್ದಾರೆ.
ಕರೆಮ್ಮ ನಾಯಕ್
ಕರೆಮ್ಮ ನಾಯಕ್
Updated on

ದೇವದುರ್ಗ: ಪಟ್ಟಣದ ಪೋಲಿಸ್ ಠಾಣೆಯ ಕರ್ತವ್ಯನಿರತ‌ ಹೆಡ್ ಕಾನ್‌ಸ್ಟೆಬಲ್ ಮೇಲೆ‌ ಜೆಡಿಎಸ್ ಶಾಸಕಿ ಕರೆಮ್ಮ ಜೆ. ನಾಯಕ ಪುತ್ರ ಸಂತೋಷ, ಸಹೋದರ ತಿಮ್ಮರೆಡ್ಡಿ ಹಾಗೂ ಆಪ್ತ ಸಹಾಯಕ ಇಲಿಯಾಸ್ ಸೇರಿ 15ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಹೆಡ್ ಕಾನ್‌ಸ್ಟೆಬಲ್ ಹನುಮಂತರಾಯ ಆರೋಪಿಸಿದ್ದಾರೆ.

ಹನುಮಂತರಾಯ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ತಾಲ್ಲೂಕಿನ ದೊಂಡಂಬಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಹಿಂದೆ ಅಕ್ರಮ ಮರಳುಗಾರಿಕೆ ವಿರುದ್ಧ ಶಾಸಕಿ ಕರೆಮ್ಮ ನಾಯಕ ತೊಡೆ ತಟ್ಟಿದ್ದರು. ಆದ್ರೀಗ ಅಕ್ರಮ ಮರಳುಗಾರಿಕೆಗೆ‌ ಪುತ್ರನ ಮೂಲಕ ಕುಮ್ಮಕ್ಕು ನೀಡುತ್ತಿರುವ ಆರೋಪ ಕೇಳಿಬಂದಿದೆ.

ಭಾನುವಾರ ಶಾಸಕಿ ಕರೆಮ್ಮ ಅವರ ಪುತ್ರ ಹಾಗೂ ಆಪ್ತ ಸಹಾಯಕ ಪ್ರವಾಸಿ ಮಂದಿರಕ್ಕೆ ಬರುವಂತೆ ಕರೆ ಮಾಡಿದ್ದರಿಂದ ಪ್ರವಾಸಿ ಮಂದಿರಕ್ಕೆ ಹೋದೆ ಎಂದು ಹಲ್ಲೆಗೊಳಗಾದ ಹನುಮಂತರಾಯ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಕೆಲ ಬಿಜೆಪಿ ಮುಖಂಡರು, ‘ಪೊಲೀಸರಿಗೆ ಈ ಪರಿಸ್ಥಿತಿ ಬಂದಿದೆ. ತಾಲ್ಲೂಕಿನ ಜನ ಭಯದಲ್ಲಿ ಜೀವನ ನಡೆಸುತ್ತಿದ್ದಾರೆ’ ಎಂದು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com