ಕಲಬುರಗಿಗೆ 'ಪ್ರತ್ಯೇಕ ಕೈಗಾರಿಕಾ ನೀತಿ' ಘೋಷಿಸಿ: ಸರ್ಕಾರಕ್ಕೆ ಆಗ್ರಹ

ಕಲಬುರಗಿಗೆ 'ಪ್ರತ್ಯೇಕ ಕೈಗಾರಿಕಾ ನೀತಿ' ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಶಶಿಕಾಂತ ಪಾಟೀಲ, ಕಾರ್ಯದರ್ಶಿ ಮಂಜುನಾಥ ಜೇವರ್ಗಿ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಲಬುರಗಿಗೆ 'ಪ್ರತ್ಯೇಕ ಕೈಗಾರಿಕಾ ನೀತಿ' ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಶಶಿಕಾಂತ ಪಾಟೀಲ, ಕಾರ್ಯದರ್ಶಿ ಮಂಜುನಾಥ ಜೇವರ್ಗಿ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕಲಬುರಗಿಯ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ ಘೋಷಣ ಮಾಡಿರುವ ರಾಜ್ಯ ಸರ್ಕಾರ ಇದಕ್ಕಾಗಿ ಅನುದಾನ ಮಂಜೂರು ಮಾಡಬೇಕು. ಹೊಸದಾಗಿ ನಿರ್ಮಿಸಿರುವ ಎಪಿಎಂಸಿ ಯಾರ್ಡ್‌ಗಳಿಗೆ ಮೇಲ್ಛಾವಣಿ ಸೌರ ಫಲಕಗಳ ಅಳವಡಿಕೆಗೂ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ್ ಡಂಗಾಪುರ ಮಾತನಾಡಿ, ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಅರಣ್ಯ ಕಾಲೇಜು ಸ್ಥಾಪಿಸುವಂತೆ ರಾಯಚೂರು ಕೃಷಿ ವಿಶ್ವವಿದ್ಯಾಲಯವು ಸರ್ಕಾರಕ್ಕೆ ಈಗಾಗಲೇ ಶಿಫಾರಸು ಮಾಡಿದೆ. ಹೀಗಾಗಿ ಈ ಬಾರಿಯ ಬಜೆಟ್‌ನಲ್ಲಿ ಚಿಂಚೋಳಿಯಲ್ಲಿ ಅರಣ್ಯ ಕಾಲೇಜು ಸ್ಥಾಪನೆ ಕುರಿತು ಸರಕಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆ, ಪ್ರತ್ಯೇಕ ಕೈಗಾರಿಕಾ ಮತ್ತು ಕೃಷಿ ನೀತಿ ಪ್ರಕಟಿಸಿ ಕೆಕೆಆರ್‌ಡಿಬಿಗೆ ಈ ವರ್ಷ 8 ಸಾವಿರ ಕೋಟಿ ರೂ. ನೀಡಬೇಕು ಎಂದು ಹೇಳಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರ ಹಣ ಮೀಸಲಿಡಬೇಕು ಮತ್ತು ಕೇಂದ್ರ ಸರ್ಕಾರದಿಂದ ವಿಶೇಷ ಅನುದಾನ ನೀಡಬೇಕು. ಕಲಬುರಗಿಯಲ್ಲಿ ರೈಲ್ವೆ ವಿಭಾಗ ಸ್ಥಾಪನೆಗೆ ಸರ್ಕಾರ ಅನುದಾನವನ್ನು ಮೀಸಲಿಡಬೇಕು. ಕಲಬುರಗಿಯಲ್ಲಿ ರೈಲ್ವೆ ವಿಭಾಗವನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com