ಶಿವಮೊಗ್ಗ: ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

ಹೋರಿ ಹಬ್ಬ ಅಥವಾ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಹೋರಿ ಬೆದರಿಸುವ ಸ್ಪರ್ಧೆ (ಸಾಂದರ್ಭಿಕ ಚಿತ್ರ)
ಹೋರಿ ಬೆದರಿಸುವ ಸ್ಪರ್ಧೆ (ಸಾಂದರ್ಭಿಕ ಚಿತ್ರ)

ಶಿವಮೊಗ್ಗ: ಹೋರಿ ಹಬ್ಬ ಅಥವಾ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. 

ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿದ ಪರಿಣಾಮ ತೀವ್ರ ಗಾಯಗೊಂಡಿದ್ದ. ತೀವ್ರ ಗಾಯಗೊಂಡಿದ್ದ ಪುನೀತ್ ರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕೊಂಡೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಕೊನೆಯುಸಿರೆಳೆದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪುನೀತ್ ತಂದೆ ಗಜೇಂದ್ರ ಆಚಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹೋರಿ ಹಬ್ಬ ಆಯೋಜಕರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಸೋಮವಾರ ಪುನೀತ್ ಆಚಾರ್ ಕಲ್ಮನೆಗೆ ಗೂಳಿ ಓಟ ವೀಕ್ಷಿಸಲು ತೆರಳಿದ್ದ. ಆತ ಕ್ರೀಡೆಯನ್ನು ವೀಕ್ಷಿಸುತ್ತಿದ್ದಾಗ, ಗೂಳಿಯೊಂದು ಅವರಿಗೆ ತಿವಿದಿದ್ದು, ಈ ವೇಳೆ ಪುನೀತ್ ತೀವ್ರವಾಗಿ ಗಾಯಗೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com