ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ದೂರು

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಮಂಗಳವಾರ ದೂರು ನೀಡಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಮಂಗಳವಾರ ದೂರು ನೀಡಿದೆ.

ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ ಜೊತೆ ಸಭೆ ಸೇರಿಸಿ ಪ್ರಚಾರ ಮಾಡುತ್ತಿರುವ ಕುರಿತು ದೂರು ಸಲ್ಲಿಸಿದ್ದಾರೆ.

ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.

ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು
ಬಿಜೆಪಿ ಹಿರಿಯ ನಾಯಕರ ಫೋಟೋ ಬಳಸಿ ಕರ್ನಾಟಕ ಕಾಂಗ್ರೆಸ್ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಫೇಸ್‌ಬುಕ್ ಹ್ಯಾಂಡ್ಲರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೋರ್ಟ್‌ನಲ್ಲಿ ದೂರು ದಾಖಲು ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com