ಹಿಂದೂ ವಿರೋಧಿ ಹೇಳಿಕೆ: ಮಂಗಳೂರು ಶಿಕ್ಷಕಿಯ ವಜಾ, ಸತ್ಯಶೋಧನಾ ತಂಡದಿಂದ ತನಿಖೆಗೆ ಕಾಂಗ್ರೆಸ್ ಆಗ್ರಹ

ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ತರಗತಿ ಒಳಗಡೆ ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.

ಸೇಂಟ್ ಜೊರೋಸಾ ಆಂಗ್ಲ ಶಾಲೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಬಿ ರಮಾನಾಥ್ ರೈ ಮತ್ತು ವಿನಯ್ ಕುಮಾರ್ ಸೊರಕೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಗೆ ಮಕ್ಕಳನ್ನು ಬಳಸಿಕೊಳ್ಳುವ ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಗಳ ಬಗ್ಗೆ ತನಿಖೆ ನಡೆಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ರೈ ಹೇಳಿದರು.

ಶಾಲೆಗೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗದಲ್ಲಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರೆ ಫರ್ಜಾನಾ ಮಾತನಾಡಿ, ಈ ಘಟನೆಯಿಂದಾಗಿ ಶಾಲೆಗೆ ಪೊಲೀಸರು ರಕ್ಷಣೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಜೈ ಶ್ರೀ ರಾಮ್ ಘೋಷಣೆ ಕೂಗಲು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಸ್ಥಳೀಯ ಬಿಜೆಪಿ ಶಾಸಕರ ಹೇಳಿಕೆ ಖಂಡನಾರ್ಹ ಎಂದರು.

ಕಾಂಗ್ರೆಸ್ ಮುಖಂಡರಾದ ಜೆ ಆರ್ ಲೋಬೋ, ಮಮತಾ ಗಟ್ಟಿ, ಶಶಿಧರ ಹೆಗಡೆ, ಶಾಹುಲ್ ಹಮೀದ್, ಶಾಲೆಟ್ ಪಿಂಟೋ ನಿಯೋಗದಲ್ಲಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com