ಗದಗ: ಡೆತ್ ನೋಟ್ ನಲ್ಲಿ ಕಾಂಗ್ರೆಸ್ ನಾಯಕನ ಹೆಸರು ಬರೆದಿಟ್ಟು ಜನಪ್ರಿಯ ವೈದ್ಯ ಆತ್ಮಹತ್ಯೆ!

ಕಾಂಗ್ರೆಸ್ ಮುಖಂಡನ ಹೆಸರನ್ನ ಡೆತ್ ನೋಟ್‌ನಲ್ಲಿ ಬರೆದಿಟ್ಟು ವೈದ್ಯ ಆತ್ಮಹತ್ಯೆ ಶರಣಾಗಿರುವ ಘಟನೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಡಾ. ಶಶಿಧರ ಹಟ್ಟಿ
ಡಾ. ಶಶಿಧರ ಹಟ್ಟಿ

ಗದಗ: ಕಾಂಗ್ರೆಸ್ ಮುಖಂಡನ ಹೆಸರನ್ನ ಡೆತ್ ನೋಟ್‌ನಲ್ಲಿ ಬರೆದಿಟ್ಟು ವೈದ್ಯ ಆತ್ಮಹತ್ಯೆ ಶರಣಾಗಿರುವ ಘಟನೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಡಾ. ಶಶಿಧರ ಹಟ್ಟಿ ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಲುಂಗಿಯಿಂದ ನೇಣಿಗೆ ಶರಣಾಗಿದ್ದಾರೆ. ಮರಳು ದಂಧೆಯಲ್ಲಿ ಪಾಲುದಾರಾಗಿದ್ದ ಶರಣಗೌಡ ಪಾಟೀಲ್ ಹಾಗೂ ತನ್ನ ನಡುವೆ ಉಂಟಾದ ಹಣಕಾಸಿನ ಒತ್ತಡಕ್ಕೆ ವೈದ್ಯ ಶಶಿಧರ ಬಲಿಯಾಗಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ರೋಣ ತಾಲೂಕಿನ ಹೊಳೆಮಣ್ಣೂರು ಬಳಿ ಮರಳಿನ ಪಾಯಿಂಟ್ ಮಾಡಿಕೊಂಡಿದ್ದರು.

ಶಶಿಧರ ಹಟ್ಟಿ, ಶರಣಗೌಡ ಪಾಟೀಲ್‌ ಸೇರಿದಂತೆ ಮೂವರು ಮರಳು ದಂಧೆಯಲ್ಲಿ ಭಾಗಿದಾರರು. ಆದರೆ, ಶಶಿಧರ ಹಟ್ಟಿ ಅವರು ಎಲ್ಲಾ ಲೆಕ್ಕವನ್ನು ಸರಿಯಾಗಿ ಕೊಟ್ಟರೂ ಪದೇ ಪದೇ ಶರಣಗೌಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಇದರಲ್ಲಿ ರಾಜು ಶಿರಗುಂಪಿ, ಅಶೋಕ ವಾಸವಿ ಶೆಟ್ಟರ್, ಗಜೇಂದ್ರಗಡ ತಾಲೂಕಿನ ಸರ್ಜಾಪೂರ ಗ್ರಾಮದ ಶರಣಗೌಡ ಎಲ್ ಪಾಟೀಲ ಹಾಗೂ ಇನ್ನೂ ಕೆಲವರ ಜೊತೆ ವೈದ್ಯ ಶಶಿಧರ ಮರಳು ವ್ಯವಹಾರ ಮಾಡುತ್ತಿದ್ದರು. ಆರೋಪಿ ಶರಣಗೌಡ ಪಾಟೀಲ, ವೈದ್ಯ ಶಶಿಧರಗೆ ನಿತ್ಯವೂ ಮರಳಿನ ವ್ಯವಹಾರದ ಲೆಕ್ಕ ಪತ್ರ, ಹಣ ಕೊಡುವಂತೆ ಒತ್ತಡ ಹಾಕುತ್ತಿದ್ದರು. ನಿತ್ಯ ಹಣ ಕೊಡಲೇಬೇಕು ಎಂದು ಮಾನಸಿಕ ಕಿರುಕುಳ ನೀಡುತ್ತಾ ಬಂದಿದ್ದರು ಎಂದು ಶಶಿಧರ್ ಹಟ್ಟಿ ಆರೋಪಿಸಿದ್ದಾರೆ.

ತನ್ನ ಆತ್ಮಹತ್ಯೆಗೆ ಕಾರಣವಾಗಿರುವ ಶರಣ ಗೌಡ ಅವರಿಗೆ ಶಿಕ್ಷೆ ಕೊಡಿಸಬೇಕು, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್‌ರಿಗೆ ಈ ವಿಷಯ ತಿಳಿಸಿ ಎಂದು ಮನವಿ ಮಾಡಲಾಗಿದೆ. ಸೋಮವಾರ ರಾತ್ರಿ ಆತ್ಮಹತ್ಯೆ ಘಟನೆ ನಡೆದಿದೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com