ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ: ಬಿಬಿಎಂಪಿಗೆ ಬಿಜೆಪಿ ಆಗ್ರಹ

ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ ಎಂದು ಬಿಬಿಎಂಪಿಗೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ ಎಂದು ಬಿಬಿಎಂಪಿಗೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.

ಸೋಮವಾರ ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಎಸ್.ಆರ್.ವಿಶ್ವನಾಥ್, ಮುನಿರಾಜು, ಸಿ.ಕೆ.ರಾಮಮೂರ್ತಿ ಸೇರಿದಂತೆ ಇತರ ಮುಖಂಡರ ನೇತೃತ್ವದ ನಿಯೋಗವು ಬಿಬಿಎಂಪಿ ಆಯುಕ್ತರಿಗೆ ಈ ಸಂಬಂಧ ದೂರು ನೀಡಿತು.

ಪರಿಷ್ಕೃತ ತೆರಿಗೆ ಮತ್ತು ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡುವುದನ್ನು ಪಾಲಿಕೆ ನಿಲ್ಲಿಸಬೇಕು. ಸ್ವಯಂ ಆಸ್ತಿ ತೆರಿಗೆ ಘೋಷಣೆಯಲ್ಲಿ ದೋಷಪೂರಿತವಾಗಿರುವ ಕಟ್ಟಡಗಳಿಗೆ ದುಪ್ಪಟ್ಟು ದಂಡ, ಬಡ್ಡಿ ಮತ್ತು ಕಾನೂನು ಬಾಹಿರವಾಗಿ ಕಂದಾಯ ವಸೂಲಿ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಸ್ವಯಂ ಘೋಷಿತ ತೆರಿಗೆ ಪದ್ಧತಿಯಲ್ಲಿ ಬಿಬಿಎಂಪಿ ಕಾಯ್ದೆಯನ್ವಯ ಐದು ವರ್ಷದಲ್ಲಿ ಹಿಂದಿನ ಬಾಕಿಯ ಹೆಸರಲ್ಲಿ ದಂಡ ಮತ್ತು ಬಡ್ಡಿ ವಸೂಲಿ ಮಾಡುವ ಅಧಿಕಾರ ಇಲ್ಲ. ಆದರೆ, ಕಾಯ್ದೆ ವಿರುದ್ಧವಾಗಿ ಪಾಲಿಕೆ ಕ್ರಮ ಜರುಗಿಸುತ್ತಿದೆ. ನಗರದಲ್ಲಿ ಕಳೆದ ಒಂಬತ್ತು ತಿಂಗಳಿನಿಂದ ಯಾವುದೇ ಅಭಿವೃದ್ಧಿ ಯೋಜನೆಯನ್ನು ಕೈಗೊಳ್ಳಲು ವಿಫಲವಾಗಿರುವ ಸರ್ಕಾರ ಇದೀಗ ನಗರದ ನಾಗರೀಕರನ್ನು ಸುಲಿಗೆ ಮಾಡಿ ಸಂಪನ್ಮೂಲ ಕ್ರೋಢೀಕರಣ ಮಾಡಲು ಮುಂದಾಗಿದೆ ಎಂದು ಕಿಡಿಕಾರಿದೆ.

'ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿದ ಬಿಜೆಪಿ ಶಾಸಕರ ನಿಯೋಗ, ಬಾಕಿ ಇರುವ ತೆರಿಗೆಗಳ ಮೇಲೆ ದಂಡ ವಿಧಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ನಗರದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಅವರು ಹೇಳಿದ್ದಾರೆ.

ಸ್ವ-ಆಸ್ತಿ ತೆರಿಗೆ ಘೋಷಣೆಯಲ್ಲಿ ದೋಷವಿರುವ ಕಟ್ಟಡಗಳಿಗೆ ಎರಡು ಬಾರಿ ದಂಡ ಮತ್ತು ಬಡ್ಡಿ ವಿಧಿಸಲಾಗುತ್ತಿದೆ. ತೆರಿಗೆ ಪರಿಷ್ಕರಣೆ ನೆಪದಲ್ಲಿ ಸುಮಾರು 76,000 ಮನೆಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಬಳಿಕ ಹಲವು  ಕಟ್ಟಡಗಳಿಗೆ ಬೀಗ ಹಾಕಿದ್ದಾರೆ. ನೀಡಲು ಪ್ರಾರಂಭಿಸುತ್ತಿದ್ದಾರೆಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com