ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ

ಬ್ಯಾನರ್ ನಲ್ಲಿ ಫೋಟೋ ಹಾಕದ ವಿಚಾರ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು-ಮುಖಂಡರ ಮಧ್ಯೆ ಮಾರಾಮಾರಿ

ಬ್ಯಾನರ್ ನಲ್ಲಿ ತಮ್ಮ ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂದು  ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಮಧ್ಯೆ ಅಸಮಾಧಾನ, ಗಲಾಟೆ ಮಾರಾಮಾರಿಯಲ್ಲಿ ಕೊನೆಗೊಂಡ ಪ್ರಸಂಗ ನಡೆದಿದೆ. 

ಕೋಲಾರ: ಬ್ಯಾನರ್ ನಲ್ಲಿ ತಮ್ಮ ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂದು  ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಮಧ್ಯೆ ಅಸಮಾಧಾನ, ಗಲಾಟೆ ಮಾರಾಮಾರಿಯಲ್ಲಿ ಕೊನೆಗೊಂಡ ಪ್ರಸಂಗ ನಡೆದಿದೆ. 

 ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ್ದನ್ನು ಕಂಡು ಅವರ ಅಭಿಮಾನಿ ಕಾರ್ಯಕರ್ತರು ಆಕ್ಷೇಪ ತೆಗೆದು ಜೋರು ಗಲಾಟೆ ಮಾಡಲಾರಂಭಿಸಿದರು. ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಸಚಿವ ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.

ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್‌‌ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ. ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ.

ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನು ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. 

Related Stories

No stories found.

Advertisement

X
Kannada Prabha
www.kannadaprabha.com