ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದಿಲ್ಲ, ಬದಲಿಗೆ ತಾತ್ಕಾಲಿಕ ನೇಮಕ: ಸರ್ಕಾರ ಸ್ಪಷ್ಟನೆ

ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ. 
ಉನ್ನತ ಶಿಕ್ಷಣ ಸಚಿವ ಸುಧಾಕರ್
ಉನ್ನತ ಶಿಕ್ಷಣ ಸಚಿವ ಸುಧಾಕರ್

ಬೆಂಗಳೂರು: ಅತಿಥಿ ಉಪನ್ಯಾಸಕರ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. 
ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ. 

ವಿಧಾನ ಪರಿಷತ್‌ ಸದಸ್ಯ ಅ. ದೇವೇಗೌಡ ಅವರು ನಿಯಮ 72ರ ಅಡಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಗಮನ ಸೆಳೆಯುವ ಸೂಚನೆಯನ್ನು ಮಂಡಿಸಿದರು. ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಕಾಯಂ ಮಾಡುವಂತೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, ಖಾಲಿ ಹುದ್ದೆಗೆ ಖಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದರು.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. ವಿವಿಧ ಮಾನದಂಡದ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ. 26 ಸಾವಿರದಿಂದ 32 ಸಾವಿರವರೆಗೆ ವೇತನ ನೀಡಲಾಗುತ್ತಿದೆ. ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅತಿಥಿ ಉಪನ್ಯಾಸಕರನ್ನು ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ ಕಾಲೇಜುಗಳಲ್ಲಿ ಹೆಚ್ಚುವರಿ ಅವಧಿಗೆ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕ ನೇಮಕ ಮಾಡಿಕೊಳ್ಳುತ್ತಿರುವುದಾಗಿ ಸ್ಪಷ್ಟನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com