ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಎಫ್ಐಆರ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಸ್ತುತ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದ ತನಿಖೆ ನಡೆಸುವುದಕ್ಕೆ ಸಿಬಿಐ ಗೆ ನೀಡಲಾಗಿದ್ದ ಅನುಮತಿಯನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿರುವ ಸಿಬಿಐ, ತನಿಖೆ ಮುಗಿಯುವ ಹಂತದಲ್ಲಿದೆ. ಈ ವೇಳೆ ತನಿಖೆಗೆ ನೀಡಿರುವ ಅನುಮತಿ ವಾಪಸ್‌ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದೆ. ರಾಜ್ಯ ಸರ್ಕಾರ ಡಿಸೆಂಬರ್‌ 22ರಂದು ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್‌ ವಿರುದ್ಧ ತನಿಖೆಗೆ ಆದೇಶಿಸಿತ್ತು.

ಲೋಕಾಯುಕ್ತ ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿದೆ. ಸಿಬಿಐ ಮೇಲ್ಮನವಿ ಅರ್ಜಿಯ ತೀರ್ಪನ್ನು ಎದುರು ನೋಡುತ್ತಿದ್ದು ಈ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿದೆಯೇ? ಎಂಬುದನ್ನು ಕಾದುನೋಡುತ್ತೇವೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ಪಿಟಿಐ ಗೆ ಹೇಳಿದ್ದಾರೆ.

ಈ ವರೆಗೂ ತನಿಖೆ ನಡೆಸದಂತೆ ಲೋಕಾಯುಕ್ತಕ್ಕೆ ಯಾವುದೇ ನಿರ್ಬಂಧ ಇಲ್ಲ ಸಿಬಿಐ ದಾಖಲೆಗಳನ್ನು ವರ್ಗಾವಣೆ ಮಾಡದೇ ನಮಗೂ ಹೆಚ್ಚಿನ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com