ಮಗು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ: ಪೊಲೀಸರು

4 ವರ್ಷದ ಮಗನನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ತುಂಬಿದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿಯ ಉದ್ಯಮಿ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಕಾಯಿಲೆ ಇಲ್ಲ ಎಂದು ಗೋವಾ ಪೊಲೀಸರು ಹೇಳಿದ್ದಾರೆ
ಸುಚನಾ ಸೇಠ್‌
ಸುಚನಾ ಸೇಠ್‌

ಪಣಜಿ/ಬೆಂಗಳೂರು: 4 ವರ್ಷದ ಮಗನನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ತುಂಬಿದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿಯ ಉದ್ಯಮಿ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಮಗನನ್ನು ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಕಾಯಿಲೆ ಇಲ್ಲ ಎಂದು ಗೋವಾ ಪೊಲೀಸರು ಹೇಳಿದ್ದಾರೆ.

ಇನ್‌ಸ್ಟಿಟ್ಯೂಟ್ ಅಫ್ ಸೈಕಾಲಜಿ ಮತ್ತು ಹ್ಯೂಮನ್ ಬಿಹೇವಿಯರ್ ಸಂಸ್ಥೆಯಲ್ಲಿ ಫೆ.2 ರಂದು ಸೂಚನಾಳನ್ನು ಮಾನಸಿಕ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯನ್ನು ಪೊಲೀಸರು ಕೋರ್ಟ್ ಎದುರು ಹಾಜರು ಪಡಿಸಿದ್ದಾರೆ.

ಮಾನಸಿಕ ಖಿನ್ನತೆಯಿಂದ ಆಕೆ ಮಗುವನ್ನು ಹತ್ಯೆ ಮಾಡಿರಬಹುದು. ಮಗುವಿನ ಮೇಲೆ ಯಾವುದೇ ಕೋಪ ಇರಲಿಲ್ಲ ಎಂದು ಸುಚನಾ ತಂದೆ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಆದರೀಗ ವೈದ್ಯಕೀಯ ವರದಿಯಲ್ಲಿ ಸುಚನಾಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲವೆಂದು ಸಾಬೀತಾಗಿದೆ.

ಸುಚನಾ ಸೇಠ್ ಪರೀಕ್ಷೆಯಲ್ಲಿ ಕೇಳಿರುವ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದಾಳೆ. ನನಗೆ ಯಾವುದೇ ತೊಂದರೆ ಇಲ್ಲ. ಇದುವರೆಗೂ ಮಾನಸಿಕ ಖಿನ್ನತೆಗೆ ಯಾವುದೇ ಚಿಕಿತ್ಸೆ ಪಡೆದಿಲ್ಲ ಎಂದು ಪೊಲೀಸರ ಮುಂದೆ ಉತ್ತರಿಸಿದ್ದಾಳೆ. ನನಗೆ ಮಾನಸಿಕ ಖಿನ್ನತೆಯ ಯಾವುದೇ ಲಕ್ಷಣಗಳು ಇಲ್ಲ. ಕೆಲಸದ ಒತ್ತಡವಾಗಲಿ, ಕೌಟುಂಬಿಕ ಹಿನ್ನೆಲೆಯಾಗಲಿ ಇಲ್ಲ ಎಂದು ಉತ್ತರಿಸಿದ್ದಾಳೆಂದು ತಿಳಿದುಬಂದಿದೆ.

ಗೋವಾದಲ್ಲಿ ತನ್ನ 4 ವರ್ಷ ಮಗುವನ್ನು ಹತ್ಯೆ ಮಾಡಿದ್ದ ಸೂಚನಾ, ಮೃತದೇಹವನ್ನು ಬ್ಯಾಗ್‌ನಲ್ಲಿಟ್ಟು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಳು. ಈ ವೇಳೆ ಸೂಚನಾಳನ್ನು ಚಿತ್ರದುರ್ಗದ ಬಳಿ ಪೊಲೀಸರು ಬಂಧಿಸಿದ್ದರು. ಪ್ರಸ್ತುತ ಸುಚನಾ ನ್ಯಾಯಾಂಗ ಬಂಧನದಲ್ಲಿದ್ದಾಳೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com