ಸವಿತಾ ಕಾಂಬಳೆ-ಆನಂದ್ ಚವ್ಹಾಣ್
ರಾಜ್ಯ
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿ ತೆಕ್ಕೆಗೆ: ಮಾಜಿ ಪೌರ ಕಾರ್ಮಿಕ ಮಹಿಳೆ ಮೇಯರ್
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿಗೆ ಒಲಿದಿದ್ದು ಪೌರ ಕಾರ್ಮಿಕ ಮಹಿಳೆ ಕನ್ನಡತಿ ಸವಿತಾ ಕಾಂಬಳೆ ಅವರು ಮೇಯರ್ ಆಗಿ ಆಯ್ಕೆಯಾಗಿದ್ದು ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್ ಆಯ್ಕೆಯಾಗಿದ್ದಾರೆ.
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿಗೆ ಒಲಿದಿದ್ದು ಪೌರ ಕಾರ್ಮಿಕ ಮಹಿಳೆ ಕನ್ನಡತಿ ಸವಿತಾ ಕಾಂಬಳೆ ಅವರು ಮೇಯರ್ ಆಗಿ ಆಯ್ಕೆಯಾಗಿದ್ದು ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್ ಆಯ್ಕೆಯಾಗಿದ್ದಾರೆ.
ಬಿಜೆಪಿ ಈ ಬಾರಿ ಕನ್ನಡ ಹಾಗೂ ಮರಾಠ ಸಮುದಾಯಗಳನ್ನು ಓಲೈಕೆ ಮಾಡಿದೆ. ಬಿಜೆಪಿಯ ಆನಂದ್ ಚವ್ಹಾಣ್ 39 ಮತ ಹಾಗೂ ಕಾಂಗ್ರೆಸ್‌ನ ಜ್ಯೋತಿ ಕಡೋಲ್ಕರ್ 20 ಮತಗಳನ್ನು ಮಾತ್ರ ಪಡೆದಿದ್ದರು.
ಮೇಯರ್ ಆಗಿ ಆಯ್ಕೆಯಾಗಿರುವ ಸವಿತಾ ಕಾಂಬಳೆ ಅವರು ಕೆಲ ವರ್ಷಗಳ ಹಿಂದೆ ಇದೇ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡಿದ್ದರು. ಬಳಿಕ ಖಾಸಗಿ ಕಂಪನಿಯೊಂದರಲ್ಲಿ ದಿನಗೂಲಿ ಕೆಲಸ ಮಾಡಿದ್ದ ಅವರು ಸ್ವಂತವಾಗಿ ಊದುಬತ್ತಿ ತಯಾರಿಕಾ ಘಟಕ ಶುರು ಮಾಡಿದ್ದರು.
2021ರಲ್ಲಿ ಅವರಿಗೆ ಒಲಿದು ಬಂದ ಅವಕಾಶ ಬಳಸಿಕೊಂಡು ಬಿಜೆಪಿಯಿಂದ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಇದೀಗ ಸವಿತಾ ಕಾಂಬಳೆ ಬೆಳಗಾವಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ