ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

2024ರ ತಿದ್ದುಪಡಿ ಮಸೂದೆ ಇದಾಗಿದ್ದು, ವಾಣಿಜ್ಯ, ಕೈಗಾರಿಕೆ, ಉದ್ಯಮ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಹೋಟೆಲ್ ಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಲಿದೆ. ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ನಿಯಮ ಪಾಲಿಸದಿದ್ದಲ್ಲಿ ಉದ್ಯಮಗಳ ಪರವಾನಗಿ ರದ್ದತಿಗೆ ಕಾರಣವಾಗುತ್ತದೆ ಎಂದು ಸರ್ಕಾರ ಸದನದಲ್ಲಿ ಪ್ರತಿಪಾದಿಸಿದೆ.

ಸಿಎಂ ಸಿದ್ದರಾಮಯ್ಯ
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ

ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು, ಸರ್ಕಾರ ಕಾನೂನು ಜಾರಿಗೊಳಿಸಲು ನಿಯಮಗಳನ್ನು ರೂಪಿಸುತ್ತಿದೆ ಎಂದು ಹೇಳಿದರು.

"ನಿಯಮ ಉಲ್ಲಂಘಿಸಿದರೆ ನಾವು ಪರವಾನಗಿ ರದ್ದುಗೊಳಿಸುತ್ತೇವೆ. ಪರವಾನಗಿಗಳನ್ನು ರದ್ದುಗೊಳಿಸಿದಾಗ ಮಾತ್ರ ವ್ಯಾಪಾರಿಳು ಮತ್ತು ಸಂಸ್ಥೆಗಳು ಎಚ್ಚೆತ್ತುಕೊಳ್ಳುತ್ತವೆ. ನಿಯಮ ಉಲ್ಲಂಘನೆಗಾಗಿ ದಂಡ ವಿಧಿಸಲು ಸರ್ಕಾರ ನಿಯಮಗಳನ್ನು ಸೇರಿಸುತ್ತದೆ ಎಂದು ಅವರು ಶಾಸಕರಿಗೆ, ವಿಶೇಷವಾಗಿ ಪ್ರತಿಪಕ್ಷ ಬಿಜೆಪಿಯವರಿಗೆ ಸಚಿವರು ಭರವಸೆ ನೀಡಿದರು.

ಕನ್ನಡ ನಾಮಫಲಕಗಳನ್ನು ಖಚಿತಪಡಿಸಿಕೊಳ್ಳಲು ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಜಾರಿ ವಿಭಾಗವನ್ನು ಹೊರತುಪಡಿಸಿ ಸರ್ಕಾರ ಕಾರ್ಯಪಡೆಗಳನ್ನು ರಚಿಸುತ್ತದೆ ಎಂದು ಸಚಿವರು ಹೇಳಿದರು.

ನಾಮಫಲಕಗಳಲ್ಲಿ ಕನ್ನಡ ಬಳಸದಿರುವ ಸಮಸ್ಯೆ ಇರುವುದು ಬೆಂಗಳೂರಿನಲ್ಲಿ ಮಾತ್ರ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com