ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.

ನಯನಾ ಎಂ.ಜಿ (27 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತುಮಕೂರಿನ ಮಧುಗಿರಿ ನಿವಾಸಿ ನಯನಾ ಎಂ.ಜಿ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು.

ಸಾಂದರ್ಭಿಕ ಚಿತ್ರ
ಗದಗ: ಡೆತ್ ನೋಟ್ ನಲ್ಲಿ ಕಾಂಗ್ರೆಸ್ ನಾಯಕನ ಹೆಸರು ಬರೆದಿಟ್ಟು ಜನಪ್ರಿಯ ವೈದ್ಯ ಆತ್ಮಹತ್ಯೆ!

ಬಂಟ್ವಾಳ ಸಮೀಪ ಹಾದು ಹೋಗುವ ನೇತ್ರಾವತಿ ಸೇತುವೆ ಬಂದಂತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಳುಗುತಜ್ಞ ಮಹಮ್ಮದ್ ತಂಡ ನದಿಯಿಂದ ನಯನಾ ಎಂ.ಜಿಯವರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com