ʻಕರಿಮಣಿ ಮಾಲೀಕ ನೀನಲ್ಲʼ ಎಂದು ರೀಲ್ಸ್ ಮಾಡಿದ ಪತ್ನಿ; ಮನನೊಂದು ಪತಿ ಆತ್ಮಹತ್ಯೆಗೆ ಶರಣು

ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್ ಅವರು ಇಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರೀಲ್ಸ್
ರೀಲ್ಸ್
Updated on

ಚಾಮರಾಜನಗರ: ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸದ್ದು ಮಾಡುತ್ತಿರುವ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ 'ಉಪೇಂದ್ರ' ಚಿತ್ರದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡಿನ ರೀಲ್ಸ್ ಮಾಡಿದ್ದು, ಪತ್ನಿಯ ಇನ್‌ಸ್ಟಾಗ್ರಾಮ್ ರೀಲ್ ನಿಂದ ಬೇಸರಗೊಂಡು 34 ವರ್ಷದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ಚಾಮರಾಜನಗರದ ಹನೂರು ಪ್ರದೇಶದಲ್ಲಿ ನಡೆದಿದೆ.

ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್ ಅವರು ಇಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಲಿ ಕೆಲಸ ಮಾಡುತ್ತಿದ್ದ ಕುಮಾರ್, ತನ್ನ ಹೆಂಡತಿ ನಿರಂತರವಾಗಿ ಸಾಮಾಜಿಕ ಮಾಧ್ಯಮಕ್ಕೆ ಅಂಟಿಕೊಂಡಿರುವುದು ಇಷ್ಟವಾಗುತ್ತಿರಲಿಲ್ಲ. ಅವರ ಪತ್ನಿ ಆಗಾಗ್ಗೆ ರೀಲ್ಸ್ ಗಳನ್ನು ಮಾಡಿ ಅಪ್‌ಲೋಡ್ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೀಲ್ಸ್
ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಪ್ರಾಥಮಿಕ ವಿಚಾರಣೆಯ ಪ್ರಕಾರ, ಕುಮಾರ್ ತನ್ನ ಹೆಂಡತಿಯ ರೀಲ್ಸ್ ಗೀಳನ್ನು ವಿರೋಧಿಸಿದ್ದರು. ಆದರೆ ಕುಮಾರ್ ಅವರ ಪತ್ನಿ ರೂಪಾ ಇತ್ತೀಚಿಗೆ ತಮ್ಮ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಸಾಂಗ್‌ಗೆ ರೀಲ್ಸ್‌ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದರು. ಈ ರೀಲ್ಸ್‌ ವಿಚಾರಕ್ಕೆ ಊರಲ್ಲಿ ಕುಮಾರ್‌ನನ್ನು ಕೆಲವರು ಕಾಲೆಳೆದು ಯಾರಪ್ಪಾ ಕರಿಮಣಿ ಮಾಲೀಕ ಎಂದು ಹೀಯಾಳಿಸಿದ್ದರಿಂದ ಮನನೊಂದು ಕುಮಾರ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೀಲ್ಸ್ ವಿಚಾರ ದಂಪತಿಗಳ ನಡುವೆ ಆಗಾಗ್ಗೆ ಜಗಳಕ್ಕೆ ಕಾರಣವಾಗುತ್ತಿತ್ತು. ಈ ವಿಚಾರ ತೀವ್ರ ಸ್ವರೂಪಕ್ಕೆ ಹೋಗಿದ್ದು, ಕುಮಾರ್ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com