2024-25ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2024-25ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2024-25ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ರಾಜ್ಯ ಬಜೆಟ್ ಗೆ ಸಿದ್ದರಾಮಯ್ಯ ಅವರು ಒಪ್ಪಿಗೆ ಪಡೆದುಕೊಂಡಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ
ರಾಜ್ಯ ಬಜೆಟ್ 2024-25ಕ್ಕೆ ಕ್ಷಣಗಣನೆ ಆರಂಭ: ಸಿಎಂ ಸಿದ್ದರಾಮಯ್ಯರಿಂದ 15ನೇ ಬಜೆಟ್ ಮಂಡನೆ, ಗ್ಯಾರಂಟಿ ಯೋಜನೆ ಮಧ್ಯೆ ಹೆಚ್ಚಿದ ನಿರೀಕ್ಷೆ

ಬಜೆಟ್ ಮಂಡಿಸುವ ಮುನ್ನ ಸಾಮಾನ್ಯವಾಗಿ ಎಲ್ಲಾ ಮುಖ್ಯಮಂತ್ರಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಳ್ಳುವುದು ಸಾಮಾನ್ಯ. ಆದರೆ‌ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ದೇವಸ್ಥಾನಕ್ಕೆ ಭೇಟಿ ನೀಡದೆ, ತಮ್ಮ ನಿವಾಸದಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com