ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ನಿಲಯ್ ವಿ ಅಂಜಾರಿಯಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ನಿಲಯ್ ವಿ ಅಂಜಾರಿಯಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಪ್ರಸ್ತುತ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ಎನ್.ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಹಾಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಫೆಬ್ರವರಿ 24 ರಂದು ನಿವೃತ್ತಿಯಾಗಲಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ಅಂಜಾರಿಯಾ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ NV ಅಂಜಾರಿಯಾ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು

ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿತ್ತು.

ನ್ಯಾಯಮೂರ್ತಿ ಅಂಜಾರಿಯಾ ಅವರು ನವೆಂಬರ್ 21, 2011 ರಂದು ಗುಜರಾತ್ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು ಮತ್ತು ಅಂದಿನಿಂದ ಅವರು ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com