ಕರ್ನಾಟಕ ಬಜೆಟ್ 2024: 'ಅನ್ನ ಸುವಿಧಾ' ಯೋಜನೆ, ಏನಿದು?

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಸಿಎಂ ಸಿದ್ದರಾಮಯ್ಯ 2024ನೇ ಸಾಲಿನ ಬಜೆಟ್ ಮಂಡನೆ ವೇಳೆ ಅನ್ನ ಸುವಿಧಾ(Anna Suvidha)ಯೋಜನೆ ಪ್ರಕಟಿಸಿದ್ದಾರೆ.

ಮನೆಯಿಂದ ಹೊರ ಹೋಗಿ ದಿನಬಳಕೆಯ ಸಾಮಗ್ರಿ ಖರೀದಿಸಲು ಕಷ್ಟವಾಗುವ ವಯೋವೃದ್ಧರನ್ನು ಗಮನದಲ್ಲಿಟ್ಟುಕೊಂಡು ಘೋಷಿಸಿರುವ ಯೋಜನೆಯಿದು. 80 ವರ್ಷ ಮೇಲ್ಪಟ್ಟ ವಯಸ್ಸಿನವರೇ ಇರುವ ಮನೆಗಳಿಗೆ ಆಹಾರ ಧಾನ್ಯ ವಿತರಣೆ ಮಾಡುವ ಅನ್ನ ಸುವಿಧಾ ಯೋಜನೆಯನ್ನು ಅವರು ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಹಸಿವು ಮುಕ್ತ ಕರ್ನಾಟಕವೇ ನಮ್ಮ ಆಶಯ. ಸಾಮಾಜಿಕ ಭದ್ರತೆಯ ಕಳಕಳಿಯೊಂದಿಗೆ ಈ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಅನ್ನ ಸುವಿಧಾ ಯೋಜನೆಯು ಹೋಮ್ ಡೆಲಿವರಿ ಆ್ಯಪ್ ಮೂಲಕ ಜಾರಿಗೆ ತರಲಾಗುವುದು. ಈ ಯೋಜನೆ ಮೂಲಕ 80 ವರ್ಷ ವಯಸ್ಸು ದಾಟಿದ ವೃದ್ಧರ ಅಥವಾ ವೃದ್ಧೆಯರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ 2024ರ ಜನವರಿ ಅಂತ್ಯದ ವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂದೂ ಸಿಎಂ ಬಜೆಟ್​​ನಲ್ಲಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com