ರಾಜ್ಯ ಬಜೆಟ್ 2024-25ಕ್ಕೆ ಕ್ಷಣಗಣನೆ ಆರಂಭ: ಸಿಎಂ ಸಿದ್ದರಾಮಯ್ಯರಿಂದ 15ನೇ ಬಜೆಟ್ ಮಂಡನೆ, ಗ್ಯಾರಂಟಿ ಯೋಜನೆ ಮಧ್ಯೆ ಹೆಚ್ಚಿದ ನಿರೀಕ್ಷೆ

ರಾಜ್ಯ ಬಜೆಟ್ 2024-25ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ಬೆಟ್ಟದಷ್ಟು ನಿರೀಕ್ಷೆಗಳಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯ ಬಜೆಟ್ 2024-25ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ಬೆಟ್ಟದಷ್ಟು ನಿರೀಕ್ಷೆಗಳಿವೆ.

ಬೆಳಗ್ಗೆ 10:15 ರಿಂದ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡಲಿದ್ದಾರೆ. ಬಜೆಟ್‌ ಗಾತ್ರ 3.75 ಲಕ್ಷ ಜೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎಂದು ಹೇಳಲಾಗುತ್ತಿದೆ.

ಈ ಪೈಕಿ ಗ್ಯಾರಂಟಿ ಯೋಜನೆಗಳ ಮುಂದುವರಿಕೆಗಾಗಿ ಶೇಕಡಾ 40ರಷ್ಟು ಹಣ ಮೀಸಲಿಡಲಿದ್ದು, ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಸಂದೇಶ ರವಾನೆ ಮಾಡಿ ಲೋಕಸಭಾ ವೋಟ್ ಬ್ಯಾಂಕ್ ಗ್ಯಾರಂಟಿ ಮಾಡಿಕೊಳ್ಳಲು ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದರೂ ಕೇಂದ್ರದಲ್ಲಿರುವ ಸಚಿವರು, ಸಂಸದರು ಮೌನವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ ಅಸಮಾಧಾನ

ಈ ಬಾರಿ ಬಜೆಟ್‌ನಲ್ಲೂ ಅಹಿಂದಗೆ ಬಂಪರ್ ದೊರೆಯಲಿದ್ದು, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ ಇರುವ ಎಲ್ಲ ಯೋಜನೆಗಳ ಮುಂದುವರಿಕೆ ಮಾಡಬಹುದು.

ಐದು ಗ್ಯಾರಂಟಿಗಳಿಗೆ ಸುಮಾರು 54 ಸಾವಿರ ಕೋಟಿ ರೂಪಾಯಿ ಮೀಸಲು ಇಡಲಿರುವ ಸಿಎಂ ರೈತರಿಗೆ ಬಡ್ಡಿ ರಹಿತ ಸಾಲ ಹಣ ಏರಿಕೆ, ಮಹಿಳಾ ಸ್ವಸಹಾಯ ಸಂಘಗಳಿಗೆ ಹಣಕಾಸು ಮೀಸಲು, ಶೂನ್ಯ ಬಡ್ಡಿದರದಲ್ಲಿ ಸಾಲ, ವೃದ್ಧಾಪ್ಯ ವೇತನ ಏರಿಕೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ವಿಶೇಷ ಅನುದಾನ, ಗೋಕಾಕ್ ಇಲ್ಲವೇ ಅಥಣಿಯನ್ನು ನೂತನ ಜಿಲ್ಲಾ ಕೇಂದ್ರವಾಗಿಸಲು ಹಣ ಮೀಸಲು, ಅಂಬೇಡ್ಕರ್ ನಿಗಮ, ವಾಲ್ಮೀಕಿ ನಿಗಮ, ತಾಂಡ ಅಭಿವೃದ್ಧಿ ನಿಗಮಗಳಿಗೆ ಮೀಸಲಿಟ್ಟ ಹಣ ಏರಿಕೆ ಮಾಡುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಬಜೆಟ್ ಮೇಲಿನ ಜನರ ನಿರೀಕ್ಷೆ ಇಂತಿವೆ...

  • ತೆರಿಗೆ ಹೆಚ್ಚಳ ಮಾಡದೇ ಜನಪ್ರಿಯ ಯೋಜನೆಗಳ ನಿರೀಕ್ಷೆ

  • ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿ ಬಗ್ಗೆ ಸರ್ಕಾರಿ ನೌಕರರಲ್ಲಿ ನಿರೀಕ್ಷೆ.

  • ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪನೆಗೆ ವಿಶೇಷ ಅನುದಾನ ಯೋಜನೆ. ಬಡ್ಡಿರಹಿತ ಸಾಲ ನೀಡುವ ಮೊತ್ತ ಹೆಚ್ಚಳ.

  • ಸಾಮಾಜಿಕ ಭದ್ರತೆಗಳ ಮಾಶಾನಸ ಹೆಚ್ಚಳ ಮಾಡುವ ನಿರೀಕ್ಷೆ.( ವೃದ್ಧಾಪ್ಯ ವೇತನ, ವಿಧವಾ ವೇತನ)

  • ಅಂಗನವಾಡಿ ಕಾರ್ಯಕರ್ತರ ವೇತನ ಹೆಚ್ಚಳ. ಆರೋಗ್ಯ ವಿಮೆ ಯೋಜನೆ ಜಾರಿ ನಿರೀಕ್ಷೆ.

  • ಸ್ತ್ರೀ ಶಕ್ತಿ ಸಂಘಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬಹುದು.

  • ಶಕ್ತಿ ಯೋಜನೆಯಿಂದ ನಷ್ಟವಾಗಿರೋ ಆಟೋ ವಲಯ,ಖಾಸಗಿ ಬಸ್ ಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ.

  • ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ನಿರೀಕ್ಷೆ.

  • ಯುವ ಉದ್ಯಮಿಗಳಿಗೆ ಉದ್ಯಮ ಸ್ಥಾಪನೆಗೆ ವಿಶೇಷ ಯೋಜನೆ/ ಬಡ್ಡಿರಹಿತ ಸಾಲ ಸೌಲಭ್ಯ ಯೋಜನೆ ಘೋಷಣೆ.

  • ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ವೇತನ ಹೆಚ್ಚಳ ಮತ್ತು ಉಚಿತ ಬಸ್ ಪಾಸ್ ನೀಡುವುದು.

  • ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ಸೇರಿ ನೀರಾವರಿ ಯೋಜನೆಗಳಿಗೆ ವಾರ್ಷಿಕ 50 ಸಾವಿರ ಕೋಟಿ ರೂ.ಮೀಸಲಿಡುವ ನಿರೀಕ್ಷೆ.

  • ವಸತಿ ರಹಿತ ಕುಟುಂಬಗಳಿಗೆ ಸರ್ಕಾರದಿಂದ ಕೊಡುವ ಮನೆಗಳ ಸಬ್ಸಿಡಿ ದರ ಹೆಚ್ಚಳ ನಿರೀಕ್ಷೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com