ಕರ್ನಾಟಕ ಬಜೆಟ್ 2024: ಶಿಕ್ಷಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದೇನು?

ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿರುವ 2024ನೇ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಸಾಕಷ್ಟು ಹಣವನ್ನು ಈ ಬಾರಿಯ ಬಜೆಟ್​ನಲ್ಲಿ ಮೀಸಲಿಡಲಾಗಿದೆ.

ಶಾಲೆಯ ಮಕ್ಕಳಿಗೆ ನಮ್ಮ ರಾಷ್ಟ್ರಧರ್ಮ ಯಾವುದು ಎಂದು ಕೇಳಿದರೆ, ಭಾವೈಕ್ಯತೆಯೇ, ಸಾಮರಸ್ಯವೇ, ಪ್ರಜಾಪ್ರಭುತ್ವವೇ ನಮ್ಮ ರಾಷ್ಟ್ರಧರ್ಮ ಎಂದು ಹೇಳಿ. ಸಂವಿಧಾನವೇ ರಾಷ್ಟ್ರೀಯ ಗ್ರಂಥ ಎಂದು ನಮ್ಮ ಮಕ್ಕಳಿಗೆ ಹೇಳಿಕೊಡಿ ಎಂದು ಪದ್ಮಶ್ರೀ ಇಬ್ರಾಹಿಂ ಸುತಾರ ಹೇಳಿರುವ ಮಾತುಗಳನ್ನು ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದರು.

ಸಂವಿಧಾನದ ಪೂರ್ವ ಪೀಠಿಕೆಯನ್ನು ಬಜೆಟ್ ಪ್ರತಿಯ ಮುಖಪುಟದಲ್ಲಿ ಈ ಬಾರಿ ಮುದ್ರಿಸಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದ ಅಬಿವೃದ್ಧಿ,ಯೋಜನೆ, ಕೆಲಸಗಳಿಗೆ 44,422 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು.

  • ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು.

  • ರಾಜ್ಯದ 20 ಸಾವಿರ ಸೈನ್ಸ್​ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು.

  • ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್​ ಹಾಗೂ ಇಂಟರ್​ ನೆಟ್​ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು.

  • 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು.

  • ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ವಿದ್ಯುತ್ , ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ, ಉಚಿತ ವಿದ್ಯುತ್ ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು.

  • ಮಹಿಳಾ ಪಾಲಿಟೆಕ್ನಿಕ್​​ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು ಇಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು.

  • ಶಾಲಾ/ಕಾಲೇಜು ಕೊಠಡಿಗಳ ನಿರ್ಮಾಣ ಹಾಗೂ ಶೌಚಾಲಯಗಳಿಗೆ ಕಾಮಗಾರಿಗಾಗಿ ಹಣ ಮೀಸಲಿಡಲಾಗಿದೆ. 850 ಕೋಟಿ

  • ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ.

  • 2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.

  • ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು

  • ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.

  • 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು

  • J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

  • ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು.

  • ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು.

  • 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು.

  • ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು ನಾವು-ಮನುಜರು ಎಂಬ ಹೆಸರಿನಲ್ಲಿ ಎಲ್ಲಾ

  • ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.

  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.

  • ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ

  • 10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು.

  • ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು.

  • ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು

  • 20,000 ವಿದ್ಯಾರ್ಥಿಗಳಿಗೆ NEET/JEE/CET ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

  • ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ

  • ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ.

  • ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com