ಕರ್ನಾಟಕ ಬಜೆಟ್ 2024: ಬಜೆಟ್‌ನಲ್ಲಿ ಕಂದಾಯ ಇಲಾಖೆಗೆ ಸಿಕ್ಕಿದ್ದೆಷ್ಠು?

2023-24ರಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಲವು ಕ್ರಮಗಳ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 2023-24ರಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಲವು ಕ್ರಮಗಳ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ ಅವರು, 2023-24ರಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ ರೈತರಿಗೆ ತುಸು ನೆಮ್ಮದಿ ನೀಡಲು NDRF ನಿಧಿಯಿಂದ 18,171 ಕೋಟಿ ರೂ.ಗಳ ಬರ ಪರಿಹಾರವನ್ನು ರಾಜ್ಯಕ್ಕೆ ನೀಡಲು ಕೋರಿ ಕೇಂದ್ರ ಸರ್ಕಾರಕ್ಕೆ 3 ಮೆಮೊರಾಂಡಮ್‌ಗಳನ್ನು ಸಲ್ಲಿಸಿದ್ದರೂ ಸಹ ಕೇಂದ್ರ ಸರ್ಕಾರವು ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರುವುದಿಲ್ಲ. ಆದಾಗ್ಯೂ ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೇ ಬರವನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಬಜೆಟ್ ನಲ್ಲಿ ಕಂದಾಯ ಇಲಾಖೆಗೆ ಸಿಕ್ಕ ಕೊಡುಗೆ ಇಂತಿದೆ...

  • ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ನೋಡಿಕೊಳ್ಳಲು ‘ಭೂ ಸುರಕ್ಷಾ ಯೋಜನೆ’ ಜಾರಿ.

  • ಆಕಾರ್‌ಬಂದ್‌ ಮತ್ತು ಆರ್‌ಟಿಸಿಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್‌ಬಂದ್‌ಗಳ ಗಣಕೀಕರಣ ಕಾರ್ಯವನ್ನು ಕೈಗೊಳ್ಳಲಾಗುವುದು.

  • ಬಾಕಿ ಉಳಿದಿರುವ ಗ್ರಾಮಗಳನ್ನು ಪೋಡಿ ಅಭಿಯಾನ 2.0ರಡಿ ಪೋಡಿ ಮುಕ್ತ ಮಾಡಲು ಆದ್ಯತೆ ಮೇರೆಗೆ ಕ್ರಮ.

  • ದರಖಾಸ್ತು ಪೋಡಿ ಅಭಿಯಾನದಡಿ ರೈತರ ಜಮೀನಿನ ದುರಸ್ತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕ್ರಮ.

  • ರಾಜ್ಯದಲ್ಲಿನ ಸುಮಾರು 30,700 ಗ್ರಾಮ ಠಾಣಾ ಪ್ರದೇಶಗಳನ್ನು ಹಂತ ಹಂತವಾಗಿ ಡ್ರೋನ್ ಮುಖಾಂತರ ಸರ್ವೆ ಮಾಡಿಸಿ ಆಸ್ತಿ ಮತ್ತು ಹಕ್ಕು ದಾಖಲಾತಿಗಳನ್ನು ಭೂ ಮಾಲೀಕರಿಗೆ ವಿತರಿಸುವ ಯೋಜನೆ ರಾಜ್ಯದಾದ್ಯಂತ ವಿಸ್ತರಣೆ.

  • ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ನೋಟಿಸ್‌ ರಹಿತ ಮ್ಯುಟೇಷನ್‌ಗಳು ನಿಗದಿತ ತಂತ್ರಾಂಶದಲ್ಲಿ ಸ್ವಯಂ-ಚಾಲಿತವಾಗಿ ಅನುಮೋದನೆಯಾಗುವಂತೆ ಕ್ರಮ.

  • ಡಿಜಿ ಕಂದಾಯ ಯೋಜನೆಯಡಿ ಕಂದಾಯ ಇಲಾಖೆಯು ನೀಡುವ ಎಲ್ಲಾ ಸೇವೆಗಳನ್ನು ಪಾರದರ್ಶಕವಾಗಿ ಮತ್ತು ತ್ವರಿತವಾಗಿ ಡಿಜಿಟಲ್ ಪ್ಲಾಟ್ಫಾರಂ ಮೂಲಕ ಸಾರ್ವಜನಿಕರಿಗೆ ಒದಗಿಸಲು ಕ್ರಮ.

  • ಸರ್ಕಾರವು ದಾಖಲೆ ರಹಿತ ಜನವಸತಿ ಪ್ರದೇಶಗಳಾದ ತಾಂಡ, ಹಟ್ಟಿ, ಹಾಡಿ, ದೊಡ್ಡಿ, ಪಾಳ್ಯ, ಮಜರೆ, ಕ್ಯಾಂಪ್, ಕಾಲೋನಿ ಇತ್ಯಾದಿಗಳನ್ನು ಗುರುತಿಸಿ ಹೊಸ ಕಂದಾಯ ಗ್ರಾಮ ಹಾಗೂ ಉಪ ಗ್ರಾಮಗಳೆಂದು ಘೋಷಿಸಿದ್ದು, ಅಲ್ಲಿನ ಸುಮಾರು 2 ಲಕ್ಷ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲು ಕ್ರಮ.

  • ಭೂ-ಮಾಪನ ಇಲಾಖೆಗೆ ಸೇರಿದ 240 ಅಭಿಲೇಖಾಲಯ ಕೊಠಡಿಗಳನ್ನು ಆಧುನೀಕರಣಗೊಳಿಸುವ ಮೂಲಕ ಕಂದಾಯ ದಾಖಲೆಗಳನ್ನು ಪಾರದರ್ಶಕ ಹಾಗೂ ಆನ್‌ಲೈನ್ ವ್ಯವಸ್ಥೆ ಮೂಲಕ ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ.

  • ಭೂಮಿ ತಂತ್ರಾಂಶದಲ್ಲಿ ಫ್ಲಾಗ್ ಮಾಡಲಾಗಿರುವ ಸರ್ಕಾರಿ ಜಮೀನಿನ ಪಹಣಿಗಳನ್ನು ಲ್ಯಾಂಡ್‌ ಬೀಟ್‌ ಆಪ್‌ ಬಳಸಿ, ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರ ಸರ್ಕಾರಿ ಜಮೀನಿನ ಒತ್ತುವರಿ ಹಾಗೂ ಸಂರಕ್ಷಣೆ ಕುರಿತು ನಿಗಾ ವಹಿಸಲಾಗುವುದು.

  • ಪ್ರಸಕ್ತ ಸಾಲಿನಲ್ಲಿ 42 ತಾಲ್ಲೂಕಾ ಆಡಳಿತ ಸೌಧದ ಕಾಮಗಾರಿಗಳಿಗೆ ರೂ.80 ಕೋಟಿ ಹಾಗೂ 14 ಜಿಲ್ಲಾಡಳಿತ ಸೌಧದ ಕಾಮಗಾರಿಗಳಿಗೆ ರೂ.50 ಕೋಟಿ ಅನುದಾನ.

  • ವಿಜಯಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ ಹೊಸ ಜಿಲ್ಲಾಡಳಿತ ಕಚೇರಿಗಳು ಹಾಗೂ ಅಗತ್ಯವಿರುವ ತಾಲ್ಲೂಕುಗಳಲ್ಲಿ ತಾಲ್ಲೂಕಾ ಆಡಳಿತ ಕಚೇರಿಗಳ ನಿರ್ಮಾಣ.

  • 33.19 ಲಕ್ಷ ರೈತರಿಗೆ ತಲಾ ರೂ.2,000ದಂತೆ ಇನ್‌ಪುಟ್‌ ಸಬ್ಸಿಡಿ ರೂ.629 ಕೋಟಿ ಅನುದಾನವನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ.

  • ಬರದ ತೀವ್ರತೆಯನ್ನು ತಗ್ಗಿಸಲು ರೂ.20 ಕೋಟಿ ವೆಚ್ಚದಲ್ಲಿ ಮಿನಿ ಮೇವಿನ ಕಿಟ್‌ ವಿತರಿಸಲಾಗುತ್ತಿದೆ.

  • ಅಂತರ್ಜಲ ಮಟ್ಟ ವೃದ್ಧಿಸಲು ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ₹200 ಕೋಟಿ ಅನುದಾನ.

  • ಸಣ್ಣ ನೀರಾವರಿ ಇಲಾಖೆಯ ಮೂಲಕ ₹100 ಕೋಟಿ ವೆಚ್ಚದ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

  • ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿಪತ್ತು ಉಪಶಮನ ನಿಧಿಯಿಂದ ಒಟ್ಟು ₹500 ಕೋಟಿ ವೆಚ್ಚದಲ್ಲಿ ವಿವಿಧ ಬರ ಉಪಶಮನ ಕ್ರಮಗಳನ್ನು ತೆಗೆದುಕೊಳ್ಳಲು ಕ್ರಮ.

  • ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪರಿಣಾಮದ ದೃಶ್ಯಗಳು ಮತ್ತು ಹವಾಮಾನ ಬದಲಾವಣೆ ಪರಿಹಾರಗಳ ಕುರಿತು ಅರಿವು ಮೂಡಿಸಲು ಹವಾಮಾನ ಬದಲಾವಣೆ ಅನುಭವ ಕೇಂದ್ರವನ್ನು ₹10 ಕೋಟಿ ವೆಚ್ಚದಲ್ಲಿ ಪ್ರಾರಂಭ.

  • Anytime Anywhere Registration ಕಾರ್ಯಕ್ರಮವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ನೋಂದಣಿ ಮತ್ತು ಮುದ್ರಾಂಕ ಕಾಯ್ದೆಗಳಿಗೆ ತಿದ್ದುಪಡಿ.

  • ಸ್ಥಿರಾಸ್ತಿ ನೋಂದಣಿಗೆ ಸಂಬಂಧಿಸಿದ ಎಲ್ಲಾ ತಂತ್ರಾಂಶಗಳ ಏಕೀಕರಣ.

  • ನಾಗರಿಕರ ಅನುಕೂಲಕ್ಕಾಗಿ ಭಾನುವಾರ ಸಹ ಆಯ್ದ ಉಪ ನೋಂದಣಾಧಿಕಾರಿ ಕಚೇರಿಯನ್ನು ತೆರೆಯಲಾಗುವುದು.

  • ನಾಗರಿಕರು ದೃಢೀಕೃತ ಪ್ರತಿಗಳನ್ನು ಪಡೆಯುವಲ್ಲಿನ ವಿಳಂಬವನ್ನು ತಗ್ಗಿಸಲು ಕೇಂದ್ರೀಕೃತ ವರ್ಚುವಲ್ ವಿತರಣಾ ವ್ಯವಸ್ಥೆಯ ಮೂಲಕ ದಾಖಲೆಗಳ ವಿತರಣೆಯನ್ನು ಸ್ವಯಂಚಾಲಿತಗೊಳಿಸಲಾಗುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com