ಕರ್ನಾಟಕ ಬಜೆಟ್ 2024: ರಾಜ್ಯಾದ್ಯಂತ 50 ಕೆಫೆ ಹೋಟೆಲ್, 'ನಮ್ಮ ಮಿಲ್ಲೆಟ್' ಯೋಜನೆ ಘೋಷಿಸಿದ ಸಿಎಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದು, ತಮ್ಮ ದಾಖಲೆಯ 15ನೇ ಬಜೆಟ್ ನಲ್ಲಿ ರಾಜ್ಯಾದ್ಯಂತ 50 ಕೆಫೆ ಹೋಟೆಲ್ ಮತ್ತು ಸಿರಿಧಾನ್ಯ ಉತ್ಪನ್ನಗಳಿಗಾಗಿ 'ನಮ್ಮ ಮಿಲ್ಲೆಟ್' ಯೋಜನೆ ಘೋಷಣೆ ಮಾಡಿದ್ದಾರೆ.
ರಾಜ್ಯಾದ್ಯಂತ 50 ಕೆಫೆ ಹೋಟೆಲ್
ರಾಜ್ಯಾದ್ಯಂತ 7.5 ಕೋಟಿ ರೂ. ವೆಚ್ಚದಲ್ಲಿ ಕೆಫೆ ಸಂಜೀವಿನಿ ಹೆಸರಿನ 50 ಕೆಫೆ ಹೋಟೆಲ್ ಗಳನ್ನು ಈ ವರ್ಷದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಈ ಕ್ಯಾಂಟೀನ್‌ಗಳು ಗ್ರಾಮೀಣ ಪ್ರದೇಶಗಳಲ್ಲಿನ ಬೇಡಿಕೆ ಮತ್ತು ಪೂರೈಕೆಯ ಕೊರತೆಯನ್ನು ನೀಗಿಸಲಿದ್ದು, ಆರೋಗ್ಯಕರ ಮತ್ತು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಬೇಯಿಸಿದ ಆಹಾರ ಮತ್ತು ಸಾಂಪ್ರದಾಯಿಕ ಸ್ಥಳೀಯ ಪಾಕಪದ್ಧತಿಗೆ ಒತ್ತು ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ನಮ್ಮ ಮಿಲೆಟ್ ಯೋಜನೆ
ರಾಜ್ಯ ಸರ್ಕಾರವು ಸಿರಿಧಾನ್ಯಗಳ ಉತ್ಪಾದನೆಗೆ ಹೊಸ ಯೋಜನೆ ಘೋಷಣೆ ಮಾಡಿದೆ. ಬಜೆಟ್ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮಿಲೆಟ್ ಯೋಜನೆ ಘೋಷಣೆ ಮಾಡಿದ್ದಾರೆ.
ಕೈಗೆಟುಕುವ ದರದಲ್ಲಿ ಸಂಸ್ಕರಿಸಿದ ಸಿರಿ ಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿ ಧಾನ್ಯ ಉತ್ಪನ್ನಗಳನ್ನು ಒದಗಿಸಲು ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ