ಬೆಂಗಳೂರು ಸೇರಿ 11 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ

ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯ ರಾತ್ರಿ 1 ಗಂಟೆಯವರೆಗೆ ವಿಸ್ತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರು ಹಾಗೂ ಇತರ 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದು, ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯ ರಾತ್ರಿ 1 ಗಂಟೆಯವರೆಗೆ ವಿಸ್ತರಿಸುವುದಾಗಿ ಹೇಳಿದ್ದಾರೆ.

ರಾಜಧಾನಿ ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ.

ಸಾಂದರ್ಭಿಕ ಚಿತ್ರ
ಕರ್ನಾಟಕ ಬಜೆಟ್ 2024: ಜನತೆಯ ಕೈಹಿಡಿದ 'ಗ್ಯಾರಂಟಿ' ಯೋಜನೆ; ಸಿದ್ದರಾಮಯ್ಯ ಸಮರ್ಥನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com