ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ!

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಈಗಾಗಲೇ ಹಲವು ಗರಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ, ಈಗ ಮತ್ತೊಂದು ಗರಿಮೆ ಪಡೆದುಕೊಂಡಿದೆ. ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆಯಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ,

ಇಂಧನ ಸಚಿವ ಕೆಜೆ ಜಾರ್ಜ್ ಅವರ ಕಚೇರಿ ಹಾಗೂ ಕೇಂದ್ರ ಸರ್ಕಾರದ ಅಂಕಿಅಂಶಗಳ ಪ್ರಕಾರ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ಅತಿದೊಡ್ಡ ಕೊಡುಗೆದಾರ ಎಂದು ಗುರುತಿಸಿದೆ.

ಕರ್ನಾಟಕದಲ್ಲಿ 3.31 ಲಕ್ಷ ಎಲೆಕ್ಟ್ರಿಕ್ ವಾಹನಗಳಿದ್ದು 5,059 ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದೆ. ದೆಹಲಿಯಲ್ಲಿ 2.74 ಲಕ್ಷ ಇವಿಗಳು ಮತ್ತು 1,886 ಚಾರ್ಜಿಂಗ್ ಸ್ಟೇಷನ್‌ಗಳು, ಉತ್ತರ ಪ್ರದೇಶದಲ್ಲಿ 7.45 ಲಕ್ಷ ಇವಿಗಳಿದ್ದು 583 ಚಾರ್ಜಿಂಗ್ ಸ್ಟೇಷನ್‌ಗಳು, ತಮಿಳುನಾಡಿನಲ್ಲಿ 2.20 ಲಕ್ಷ ಇವಿಗಳು ಮತ್ತು 643 ಚಾರ್ಜಿಂಗ್ ಸ್ಟೇಷನ್‌ಗಳು, ಕೇರಳದಲ್ಲಿ 1.39 ಲಕ್ಷ ಇವಿಗಳು ಮತ್ತು 958 ಚಾರ್ಜಿಂಗ್ ಪಾಯಿಂಟ್ ಗಳಿವೆ, ಮಹಾರಾಷ್ಟ್ರವು 4.15 ಲಕ್ಷ ವಾಹನಗಳು ಮತ್ತು 3,079 ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿದೆ ಮತ್ತು ರಾಜಸ್ಥಾನವು 2.33 ಲಕ್ಷ ವಾಹನಗಳು ಮತ್ತು 500 ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿದೆ.

ಸಾಂದರ್ಭಿಕ ಚಿತ್ರ
ಬೆಳಗಾವಿಯಲ್ಲಿ ಎಲೆಕ್ಟ್ರಿಕ್ ವಾಹನ ಪ್ಲಾಂಟ್ ನಿರ್ಮಿಸಲು ರಷ್ಯಾದ ಕಂಪನಿ ಆಸಕ್ತಿ: ಮುರುಗೇಶ್ ನಿರಾಣಿ

ಎಲೆಕ್ಟಿಕ್ ವಾಹನಗಳ ಸಂಖ್ಯೆ ಕಡಿಮೆ ಇದ್ದರೂ, ಚಾರ್ಜಿಂಗ್ ಕೇಂದ್ರಗಳ ಸಂಖ್ಯೆ ಹೆಚ್ಚಾಗಿದೆ. ಸ್ಥಾಪಿಸಲಾದ ಎಲ್ಲಾ ಚಾರ್ಜಿಂಗ್ ಸ್ಟೇಷನ್‌ಗಳನ್ನು ವಿದ್ಯುತ್ ಸಚಿವಾಲಯವು ನಿರ್ವಹಿಸುವ ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಅಡಿಯಲ್ಲಿ ಇವಿ ಯಾತ್ರಾ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದೆ ಎಂದು ತೋರಿಸುತ್ತದೆ. ಈ ಪಟ್ಟಿಯು ಕಾರ್ಪೊರೇಟ್ ಸಂಸ್ಥೆಗಳು, ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಬೆಸ್ಕಾಂನ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಹೆದ್ದಾರಿಗಳಲ್ಲಿ, ಟೋಲ್ ಗೇಟ್‌ಗಳಲ್ಲಿ ಮತ್ತು ಹೆದ್ದಾರಿಯುದ್ದಕ್ಕೂ ಸಾರ್ವಜನಿಕ ಸ್ಥಳಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲು ಅನುಮತಿ ಕೋರಿ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆಯೂ ಇದೆ. ರಾಷ್ಟ್ರೀಯ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ಗುರುತಿಸಲಾಗಿದ್ದು, ಪ್ರಸ್ತಾವನೆಯನ್ನು ಕೇಂದ್ರದ ಮುಂದೆ ಇಡಲಾಗಿದೆ. ರಾಜ್ಯ ಹೆದ್ದಾರಿಗಳ ಅಡಿಯಲ್ಲಿರುವ 2,880 ಚಾರ್ಜಿಂಗ್ ಕೇಂದ್ರಗಳನ್ನು ಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com