2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ

2024-25ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,71,383 ಕೋಟಿ ರೂ.ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್‌ ಅಲ್ಲ. 5 ಗ್ಯಾರಂಟಿ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com