ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶನ, ಘೇರಾವ್ ಗೆ ಯತ್ನ

ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಘೇರಾವ್ ಗೆ ಯತ್ನಿಸಿದ ಘಟನೆ ಹೊರವಲಯ ಬೋಂದೆಲ್ ಬಳಿ ಇಂದು ನಡೆಯಿತು.
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆANI
Updated on: 

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಘೇರಾವ್ ಗೆ ಯತ್ನಿಸಿದ ಘಟನೆ ಹೊರವಲಯ ಬೋಂದೆಲ್ ಬಳಿ ಇಂದು ನಡೆಯಿತು.

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಮಂಗಳೂರು ಜೆರೋಸಾ ಶಾಲೆ ವಿವಾದ: ಸದನದಲ್ಲಿ ಗದ್ದಲ, ಬಿಜೆಪಿ ಶಾಸಕನ ವಿರುದ್ಧದ ಎಫ್‌ಐಆರ್‌ಗೆ ವಿರೋಧ

ಅಡ್ಯಾರ್ ನ ಸಹ್ಯಾದಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕಾರನ್ನು ತಡೆದು ಘೇರಾವ್ ಹಾಕಲು ಯತ್ನಿಸಿದರು.

ಶಾಸಕ ಭರತ್ ಶೆಟ್ಟಿ ಹಾಗೂ ವೇದವ್ಯಾಸ್ ಕಾಮತ್ ಮೇಲೆ ವಿನಾಕಾರಣ ಎಫ್ ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X