ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ತಡೆಯಬೇಕು: ಸಿಎಂ ಸಿದ್ದರಾಮಯ್ಯ

ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸೇರಿದ್ದು, ಅದರ ತಳಹದಿಯನ್ನು ಹಾಳು ಮಾಡುವ, ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು.
ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸೇರಿದ್ದು, ಅದರ ತಳಹದಿಯನ್ನು ಹಾಳು ಮಾಡುವ, ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೆಲವರಿಗೆ ಸಂವಿಧಾನದ ಬಗ್ಗೆ ನಂಬಿಕೆ ಮತ್ತು ಗೌರವ ಇಲ್ಲ. ಹೀಗಾಗಿ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಜಾತ್ಯತೀತತೆ, ಸಮಾನತೆ ಮತ್ತು ಭ್ರಾತೃತ್ವದ ತತ್ವಗಳು ಸಂವಿಧಾನದ ಅಡಿಪಾಯವಾಗಿದ್ದು, ಅದನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ವಿಫಲಗೊಳಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
ಸಂವಿಧಾನ ಜಾರಿಯಾಗಿ 75 ವರ್ಷ, ಫೆ.24-25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ: ಸಿಎಂ ಸಿದ್ದರಾಮಯ್ಯ

‘ದೇಶಕ್ಕೆ ಸ್ವಾತಂತ್ರ್ಯ ಬಂದು 77 ವರ್ಷಗಳಾಗಿವೆ. ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಕಳೆದರೂ ಎಲ್ಲರಿಗೂ ಎಲ್ಲ ಹಕ್ಕುಗಳು ಸಿಕ್ಕಿಲ್ಲ. 75 ವರ್ಷ ಕಳೆದರೂ ನಮ್ಮ ಸಮಾಜದಿಂದ ಅಸಮಾನತೆ ದೂರವಾಗಿಲ್ಲ ಎಂದು ’ ಎಂದಿದ್ದಾರೆ.

ಈ ಬಗ್ಗೆ ಎಲ್ಲರೂ ಜಾಗೃತರಾಗಬೇಕು, ಸಂವಿಧಾನ ನೀಡಿರುವ ಆರ್ಥಿಕ, ಸಾಮಾಜಿಕ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಬೇಕು. ದೇಶದ ಜನರಿಗೆ ಸಂವಿಧಾನ ನಮಗೇನು ಕೊಟ್ಟಿದೆ ಎನ್ನುವುದನ್ನು ತಿಳಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತದ ಸಂವಿಧಾನ ಜಾರಿಗೆ ಬಂದು 75ನೇ ವರ್ಷಕ್ಕೆ ಕಾಲಿಟ್ಟಿದೆ. 75ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿನಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com