ರಾಮನಗರ: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಮನಗರ: ಬೆಂಗಳೂರು ನಗರದ ಮೈಕೊ ಲೇಔಟ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದ ತಾಲ್ಲೂಕಿನ ದ್ಯಾವಸಂದ್ರದ ಮಂಜುಶ್ರೀ (27) ಅವರು ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2020-21‌ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ‌ ಮಾಡುತ್ತಿದ್ದ ಮಂಜುಶ್ರೀ ಬೆಂಗಳೂರಿನ ಮೈಕೋ ಲೇಔಟ್​ನಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಂಜುಶ್ರೀ ಅವರು ಇತ್ತೀಚೆಗೆ ಶಿವಾಜಿನಗರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು. ಶುಕ್ರವಾರ ದ್ಯಾವಸಂದ್ರ ಗ್ರಾಮಕ್ಕೆ ಬಂದಿದ್ದ ಅವರು, ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ಸಾಂದರ್ಭಿಕ ಚಿತ್ರ
ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕೆಲ ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಮಂಜುಶ್ರೀ ನಿನ್ನೆ ರಾತ್ರಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಶವ ರವಾನಿಸಲಾಗಿದೆ. ಹಾರೋಹಳ್ಳಿಯ ದಯಾನಂದ್ ಆಸ್ಪತ್ರೆಯಲ್ಲಿ‌ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಸ್ಥಳಕ್ಕೆ ಹಾರೋಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com